ಮಾನ್ವಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಲ್ಪಸಂಖ್ಯಾತರ ಇಲಾಖೆ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಅಸ್ವಸ್ಥ ವಿದ್ಯಾರ್ಥಿಗಳ ಆರೋಗ್ಯವನ್ನು ಎಂಎಲ್‌ಸಿ ಎನ್.ಎಸ್.ಬೋಸರಾಜು ವಿಚಾರಿಸಿದರು. 
ರಾಯಚೂರು

ಆಹಾರ ಪದಾರ್ಥ ಸ್ವಚ್ಛವಾಗಿಟ್ಟುಕೊಳ್ಳಿ

ಅಶೋಕ್ ಕುಮಾರ್ ಎನ್
ಮಾನ್ವಿ: ಸರ್ಕಾರ ನೂರಾರು ಕೋಟಿ ರೂ. ಖರ್ಚು ಮಾಡಿ ಬಡಮಕ್ಕಳಿಗೆ ವಸತಿ ಶಾಲೆಗಳನ್ನು ನಿರ್ಮಿಸಿ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದ್ದರೂ, ಅವುಗಳನ್ನು ಸರಿಯಾಗಿ ಬಳಕೆ ಮಾಡದೆ ನಿರ್ಲಕ್ಷ ವಹಿಸುವುದು ಸರಿಯಲ್ಲ ಎಂದು ಎಂಎಲ್‌ಸಿ ಎನ್‌ಎಸ್ ಬೋಸರಾಜು ಅಲ್ಪಸಂಖ್ಯಾತರ ಇಲಾಖೆ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ವೆಂಕಟೇಶ ನಾಯಕ ಅವರನ್ನು ತರಾಟೆಗೆ ತೆಗದುಕೊಂಡರು.
ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಬುಧವಾರ ಉಪಾಹಾರ ಸೇವನೆ ಬಳಿಕ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ಗುರುವಾರ ಮಾತನಾಡಿದರು. ವಿದ್ಯಾರ್ಥಿಗಳಿಗೆ ನೀಡುವ ಆಹಾರ, ಆರೋಗ್ಯ ಹಾಗೂ ಶಿಕ್ಷಣದ ಬಗ್ಗೆ ಕಾಳಜಿ ವಹಿಸಿಬೇಕು. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆೆ ವಹಿಸಿಬೇಕು. ಆಹಾರ ಪದಾರ್ಥಗಳ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಾಕೀತು ಮಾಡಿದರು.
ಶಾಸಕ ಹಂಪಯ್ಯನಾಯಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಗ್ಯಾರಂಟಿ ಯೋಜನೆ ತಾಲೂಕು ಸಮಿತಿ ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಪ್ರಮುಖರಾದ ರಾಜಾ ಸುಭಾಷಚಂದ್ರ ನಾಯಕ, ಕಿರಿಲಿಂಗಪ್ಪ, ಬಿಇಒ ಚಂದ್ರಶೇಖರ ದೊಡ್ಡಮನಿ, ಟಿಎಚ್‌ಒ ಡಾ.ಶರಣಬಸವ ಪಾಟೀಲ್, ಡಾ.ಶರಣಪ್ಪ ಬಲ್ಲಟಗಿ, ಔಷಧ ತಜ್ಞ ಬಸವರಾಜ ಪೋತ್ನಾಳ, ಗಿರಿಯಪ್ಪ ಇನ್ನಿತರರು ಇದ್ದರು.