ರಾಯಚೂರು
ಪರಿಷ್ಕೃತ ಕನಿಷ್ಠ ವೇತನ ಜಾರಿ, ಶಾಸನಬದ್ದ ಸೌಲಭ್ಯಗಳನ್ನು ಒದಗಿಸುವುದು ವಜಾಗೊಳಿಸಿರುವುದನ್ನು ಹಾಗೂ ಕಾನೂನು ಬಾಹಿರವಾಗಿ ಕಾರ್ಮಿಕರನ್ನು ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಗುತ್ತಿಗೆ ಕಾರ್ಮಿಕರ ಸಂಘದಿಂದ ಮಂಗಳವಾರ ನಗರದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಪ್ರತಿಭಟನೆ ಮಾಡಿದರು.
ಕೆಪಿಟಿಸಿಎಲ್ ವ್ಯಾಪ್ತಿಯ 110 ಕೆವಿ ಹಾಗೂ 220 ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಪಾಳಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ 22-05-2026ರಿಂದ ಜಾರಿಗೆ ಬಂದಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಪಾವತಿಸುವಂತೆ ಗುತ್ತಿಗೆದಾರರಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.
ಈ ಕುರಿತು ಈಗಾಗಲೇ ಸಂಬಂಧಿಸಿದ ಕಚೇರಿಗೆ ಮನವಿ ಸಲ್ಲಿಸಿದ್ದರೂ ಗುತ್ತಿಗೆದಾರರು ಪರಿಷ್ಕೃತ ವೇತನವನ್ನು ಪಾವತಿಸದೆ, ಹೊಸ ವೇತನ ರದ್ದಾಗಿದೆ ಎಂಬ ನೆಪ ಹೇಳಿ ಹಳೆಯ ವೇತನ ವನ್ನೇ ಪಾವತಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಇತರೆ ಜಿಲ್ಲೆಗಳಲ್ಲಿ ಪರಿಷ್ಕೃತ ವೇತನದ ಆಧಾರದ ಮೇಲೆ ಬಿಲ್ ಪಾವತಿಯಾಗುತ್ತಿರು ವುದು ಗಮನಕ್ಕೆ ಬಂದಿದ್ದು, ಕೆಪಿಟಿಸಿಎಲ್ ಅಧಿಕಾರಿಗಳು ಈ ಕುರಿತು ಸೂಕ್ತ ನಿರ್ದೇಶನ ನೀಡದಿರುವುದು ವಿಷಾದನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಿ, ಬಾಕಿ ಇರುವ ವೇತನದ ಮೊತ್ತವನ್ನು ಕೂಡಲೇ ಪಾವತಿಸಬೇಕು. ಎಲ್ಲ ಕಾರ್ಮಿಕರಿಗೆ ಇಎಸ್‌ಐ, ಪಿಎಫ್ ಸೇರಿದಂತೆ ಶಾಸನಬದ್ಧ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.