ದೇವದುರ್ಗ ತಾಪಂ ಆವರಣದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ತಾಪಂ ಇಒ ಬಸವರಾಜ ಹಟ್ಟಿ, ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕಿ ಮಹೇಶ್ವರಿ, ಸಿಬ್ಬಂದಿ ತಾಯಪ್ಪ, ಬಸವರಾಜ, ಶಿವು ಇತರರಿದ್ದರು.
ಇಒ ಬಸವರಾಜ ಹಟ್ಟಿ ಹೇಳಿಕೆ ದೇವದುರ್ಗದಲ್ಲಿ ಗಣರಾಜ್ಯೋತ್ಸವ ಆಚರಣೆ
ದೇವದುರ್ಗ: ಪಟ್ಟಣ ಸೇರಿ ತಾಲೂಕಿನಲ್ಲಿ 77ನೇ ಗಣರಾಜ್ಯೋತ್ಸವ ಮಂಗಳವಾರ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ವಿವಿಧ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳು ಧ್ವಜಾರೋಹಣ ಮಾಡಿದರು. ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿ ಕಾರ್ಯಕ್ರಮ ಕೈಗೊಂಡು ಗಮನಸೆಳೆದರು.
ತಾಪಂ ಕಚೇರಿಯಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಒ ಬಸವರಾಜ ಹಟ್ಟಿ ಧ್ವಜಾರೋಹಣ ನೆರವೇರಿಸಿದರು. ದೇಶದಲ್ಲಿ ಎಲ್ಲ ಒಕ್ಕೂಟಗಳನ್ನು ಒಗ್ಗೂಡಿಸಿ ಸಂವಿಧಾನ ಅಳವಡಿಸಿಕೊಂಡ ದಿನದ ಅಂಗವಾಗಿ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ದೇಶದ ಎಲ್ಲ ನಾಗರಿಕರು ಸಂವಿಧಾನ ಅಧ್ಯಯನ ಮಾಡಬೇಕು ಎಂದರು. ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕಿ ಮಹೇಶ್ವರಿ, ಸಿಬ್ಬಂದಿ ತಾಯಪ್ಪ, ಬಸವರಾಜ, ಶಿವು ಇತರರಿದ್ದರು.
ಪುರಸಭೆ ಕಚೇರಿಯಲ್ಲಿ ಮುಖ್ಯಾಧಿಕಾರಿ ಕೆ.ಹಂಪಯ್ಯ, ಸಾರ್ವಜನಿಕ ಆಸ್ಪತ್ರೆಯಲ್ಲಿ ಟಿಎಚ್‌ಒ ಡಾ.ಬನದೇಶ್ವರ, ಠಾಣೆಯಲ್ಲಿ ಪಿಐ ಎಸ್.ಮಂಜುನಾಥ, ಕೃಷಿ ಇಲಾಖೆ ಕಚೇರಿಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿದರು.
ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಸಾಪದಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಲೆ, ಸಂಗೀತ, ಕಂಠಪಾಠ, ಕವನವಾಚನ, ಚರ್ಚಾ ಸ್ಪರ್ಧೆ, ಕ್ವಿಜ್, ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಸನ್ಮಾನಿಸಲಾಯಿತು.