ಸಿಂಧನೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಗಣತಿ ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ, ಜನಗಣತಿ ಸಿಬ್ಬಂದಿ ಇದ್ದರು. 
ರಾಯಚೂರು

ಜನಗಣತಿ ಯಶಸ್ಸಿಗೆ ಸಾರ್ವಜನಿಕರು ಕೈಜೋಡಿಸಲಿ

ಪ್ರಮುಖ ಮುಖ್ಯಾಂಶಗಳು

  • ತರಬೇತಿ
  • ಕಾರ್ಯವನ್ನು
  • ಪ್ರಾರಂಭಿಸಲಿದ್ದು
* ಸಿಂಧನೂರು ತಹಸೀಲ್ದಾರ್ ಅರುಣ್ ದೇಸಾಯಿ ಮನವಿ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಸಿಂಧನೂರು: ಜನಗಣತಿ ತರಬೇತಿ ಪಡೆದ ಸಿಬ್ಬಂದಿ ಏ.16ರಿಂದ ತಮ್ಮ ಕಾರ್ಯವನ್ನು ಪ್ರಾರಂಭಿಸಲಿದ್ದು, ತಾಲೂಕಿನಲ್ಲಿ 745 ಗಣತಿದಾರರನ್ನು ನೇಮಿಸಲಾಗಿದೆ ಎಂದು ತಹಸೀಲ್ದಾರ್ ಅರುಣ್ ದೇಸಾಯಿ ತಿಳಿಸಿದರು.
ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಶನಿವಾರ ಗಣತಿ ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜನಗಣತಿ ಕಾರ್ಯವನ್ನು ಸಮರ್ಥವಾಗಿ ಮತ್ತು ನಿಖರವಾಗಿ ನಡೆಸುವ ಉದ್ದೇಶದಿಂದ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಲಾಗಿದೆ. ಜನಗಣತಿಯ ಭಾಗವಾಗಿ ಸ್ವಯಂಗಣನೆ ಪ್ರಕ್ರಿಯೆ ಏ.1ರಿಂದ 15ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಸಾರ್ವಜನಿಕರು ತಾವೇ ತಮ್ಮ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿದೆ.
ನಂತರ ಏ.16ರಿಂದ ಮೇ 15ರವರೆಗೆ ಗಣತಿ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದು, ಈ ಮಹತ್ವದ ರಾಷ್ಟೀಯ ಕಾರ್ಯ ಯಶಸ್ವಿಯಾಗಲು ಸಿಂಧನೂರು ತಾಲೂಕಿನ ಸಾರ್ವಜನಿಕರು ಸಹಕಾರ ನೀಡಬೇಕು. ಸರಿಯಾದ ಮತ್ತು ಸಂಪೂರ್ಣ ಮಾಹಿತಿಯನ್ನು ಕೊಟ್ಟು ಜನಗಣತಿ ಕಾರ್ಯಕ್ಕೆ ಕೈಜೋಡಿಸಬೇಕು. ಶೇ.100 ಜನಗಣತಿಯನ್ನು ಪೂರ್ಣಗೊಳಿಸುವ ಗುರಿ ಹೊಂದಬೇಕು ಎಂದು ಮನವಿ ಮಾಡಿದರು.