ಮುದಗಲ್ ಸಮೀಪದ ಮಟ್ಟೂರು ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಬಸನಗೌಡ ತುರ್ವಿಹಾಳ ಭೂಮಿಪೂಜೆ ನೆರವೇರಿಸಿದರು. ಪ್ರಮುಖರಾದ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಪಂಪಾಪತಿ ಸಾಹುಕಾರ್, ಮುತ್ತಣ್ಣ ಗೌಡ, ಪಂಪಣ್ಣ ಜಾವೂರ್, ಬಸವಂತಪ್ಪ ಮಟ್ಟೂರ್ ಇತರರಿದ್ದರು. 
ರಾಯಚೂರು

ರಸ್ತೆ-ಕೊಠಡಿಗಳು ಗುಣಮಟ್ಟದಿಂದ ಕೂಡಿರಲಿ

ಮುದಗಲ್: ಗ್ರಾಮೀಣ ಭಾಗಗಳಲ್ಲಿ ಕೈಗೆತ್ತಿಕೊಂಡ ಸಿಸಿ ರಸ್ತೆ ಕಾಮಗಾರಿ ಮತ್ತು ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಗುತ್ತಿಗೆದಾರರಿಗೆ ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಸೂಚಿಸಿದರು. 
ಸಮೀಪದ ಪೈಗಂಬರ ನಗರದಲ್ಲಿ 2023-24ನೇ ಸಾಲಿನ ಕೆಕೆಆರ್‌ಡಿಬಿ ಅನುದಾನದಡಿ 35 ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು. 
ಬಳಿಕ ಗುಡಿಹಾಳ ಗ್ರಾಮದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯಡಿ 30 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ಮಟ್ಟೂರು ಗ್ರಾಮದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದರು. 
ಮಸ್ಕಿ ಕಾಂಗ್ರೆಸ್ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಮುಖಂಡರಾದ ಪಂಪಾಪತಿ ಸಾಹುಕಾರ್, ಮುತ್ತಣ್ಣ ಗೌಡ, ಈರಣ್ಣ ಅಂಕುಶದೊಡ್ಡಿ, ಪಂಪಣ್ಣ ಜಾವೂರ್, ಬಸವಂತಪ್ಪ ಮಟ್ಟೂರ್, ವೀರೇಶ್ ಇತರರಿದ್ದರು.