ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಸೋಮವಾರ ಎಡಿಸಿ ಶಿವಾನಂದ ಭಜಂತ್ರಿ ಅಧ್ಯಕ್ಷತೆಯಲ್ಲಿ ಜನ ಭಾಗೀದಾರ ಸಬ್ಸೆ ದೂರ, ಸಬ್ಸೆ ಪೆಹ್ಲೆ ಅಭಿಯಾನ ಸಭೆ ನಡೆಯಿತು. ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ್, ಡಿಎಚ್‌ಓ ಡಾ.ಸುರೇಂದ್ರ ಬಾಬು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಮಾನ್ಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶರಣಮ್ಮ ಇದ್ದರು.
ರಾಯಚೂರು
ಸರ್ಕಾರದ ಯೋಜನೆಗಳನ್ನು ಬುಡಕಟ್ಟು ಸಮುದಾಯದ ಅರ್ಹ ಫಲಾನುಭವಿಗಳ ಮನೆ ಮನೆಗೆ ತಲುಪಿಸುವ ಮೂಲಕ ಅವರನ್ನು ಆರ್ಥಿಕ ಹಾಗೂ ಸಾಮಾಜಿಕವಾಗಿ ಮುಖ್ಯ ವಾಹಿನಿಗೆ ತರುವ ಕಾರ್ಯ ಆಗಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ರಾಯಚೂರು ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ ಕಾರ್ಯಕ್ರಮದಡಿ ಜನ ಭಾಗೀದಾರ ಸಬ್ಸೆ ದೂರ, ಸಬ್ಸೆ ಪೆಹ್ಲೆ ಅಭಿಯಾನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಭಿಯಾನದಲ್ಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆಯುಷ್ಮಾನ್ ಭಾರತ ಕಾರ್ಡ್ , ಜಾತಿ ಪ್ರಮಾಣ ಪತ್ರ, ಪಿಎಂ ಕಿಸಾನ್ ಕ್ರೆಡಿಟ್ ಕಾರ್ಡ್, ಜನಧನ್ ಬ್ಯಾಂಕ್ ಖಾತೆ, ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ದಾಪ್ಯ ಪಿಂಚಣಿ, ವಿಧವಾ ಪಿಂಚಣಿ, ದಿವ್ಯಾಂಗ ಪಿಂಚಣಿ ಹಾಗೂ ಉದ್ಯೋಗ ಮತ್ತು ಜೀವನೋಪಾಯ ಯೋಜನೆಗಳಾದ ಪಿಎಂ ವಿಶ್ವಕರ್ಮ, ಮುದ್ರಾ ಸಾಲಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡದರು.
ಗ್ರಾಮ ಮಟ್ಟದಲ್ಲಿ ಫಲಾನುಭವಿಗಳಿಗೆ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮಗಳನ್ನು ಆಯೋಜಿಸುವುದು. ಆದಿಕರ್ಮಯೋಗಿ ಹಾಗೂ ಎನ್.ಜಿ.ಓ.ಗಳ ಮೂಲಕ ಗ್ರಾಮಗಳಲ್ಲಿ ಟ್ರಾನ್ಸೆಕ್ಸೃ್ ವಾಕ್ ನಡೆಸಬೇಕು. ಅವರ ಅಹವಾಲು ಸ್ವೀಕಾರ ಹಾಗೂ ತ್ವರಿತವಾಗಿ ಪರಿಹಾರ ಕೈಗೊಳ್ಳಬೇಕು. ಈ ಕುರಿತು ಪ್ರಗತಿ ವರದಿ ಸಿದ್ಧಪಡಿಸಿ, ಅದರಂತೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ್, ಡಿಎಚ್‌ಓ ಡಾ.ಸುರೇಂದ್ರ ಬಾಬು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಮಾನ್ಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶರಣಮ್ಮ ಸೇರಿದಂತೆ ಅನೇಕರು ಇದ್ದರು.