ಲಿಂಗಸುಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ಆಚರಿಸಲಾಯಿತು.  
ರಾಯಚೂರು

ಯುವಜನತೆಗೆ ದಾರಿದೀಪ ಮಹಾಂತ ಶ್ರೀ ಆದರ್ಶ

ಲಿಂಗಸುಗೂರು: ಮಹಾಂತ ಶಿವಯೋಗಿಗಳು ಜೋಳಿಗೆ ಹಿಡಿದು ದುಶ್ಚಟಗಳನ್ನು ತ್ಯಜಿಸುವಂತೆ ಜನರನ್ನು ಪ್ರೇರೇಪಿಸಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮಹತ್ವದ ಸಂದೇಶ ಸಾರಿದ ಮಹಾನ್ ಸಮಾಜ ಸುಧಾರಕರಾಗಿದ್ದರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ದೊಡ್ಡಬಸಪ್ಪ ಹುಡೇದಗಡ್ಡಿ ಹೇಳಿದರು.

ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು. ಡಾ.ಮಹಾಂತ ಶಿವಯೋಗಿಗಳ ಜೀವನಾದರ್ಶಗಳು ಯುವಜನತೆಗೆ ದಾರಿದೀಪವಾಗಿವೆ ಎಂದು ತಿಳಿಸಿದರು.
ಪ್ರಾಚಾರ್ಯ ವೆಂಕಟನಾರಾಯಣ ಮಾತನಾಡಿ, ಮಹಾಂತ ಶಿವಯೋಗಿಗಳ ವಿಚಾರಧಾರೆಗಳು ಸಮಾಜದಲ್ಲಿ ಸಮಾನತೆ, ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರಸ್ತುತವಾಗಿವೆ. ವಿದ್ಯಾರ್ಥಿಗಳು ಶ್ರೀಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಡಾ.ಸಂಗನಗೌಡ, ಡಾ.ಹನುಮಂತಪ್ಪ, ಡಾ.ಸೈಯದ್ ಆರೀಫ್ ಉಲ್ಲಾ, ವೀರೇಶ, ಜ್ಯೋತಿಲಕ್ಷ್ಮೀ, ನವೀನಕುಮಾರ ಎ. ಎನ್., ಆಂಜನೇಯ, ಬೀರಪ್ಪ, ಡಾ.ಸಿರಾಜ್ ಅಹ್ಮದ್, ನಜ್ಮಾ ಬೇಗಂ, ಬಸವರಾಜ, ಲಕ್ಷ್ಮೀ, ಸೀತಮ್ಮ, ನಾಗಯ್ಯ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.