ರಾಯಚೂರು ರಾಯಚೂರು ರಿರ್ಪೋಟರ್ ಗಿಲ್ಡ್, ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘಗಳಿಂದ ಡಿ.28 ರಂದು ಬೆಳಗ್ಗೆ 10: 30ಕ್ಕೆ ನಗರದ ಪತ್ರಿಕಾ ಭವನದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜನೆ ಮಾಡಲಾಗಿದೆಂದು ಗಿಲ್ಡ್ ಅಧ್ಯಕ್ಷ ವಿಜಯ ಕುಮಾರ ಜಾಗಟಗಲ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಮಾತನಾಡಿ, ಕಾರ್ಯಕ್ರಮವನ್ನು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಲಿದ್ದಾರೆ. ಪತ್ರಕರ್ತರ ತುರ್ತು ನಿಧಿಗೆ ಎಂಎಲ್ಸಿ ಎ.ವಸಂತ ಕುಮಾರ ಚಾಲನೆ ನೀಡಲಿದ್ದಾರೆ. ಸಂಸದ ಜಿ.ಕುಮಾರ ನಾಯಕ ಗಿಲ್ಡ್‌ನ ವೆಬ್ಸೈಟ್ ಉದ್ಘಾಟಿಸಲಿದ್ದಾರೆ. ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳನ್ನು ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಮತ್ತು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಪ್ರದಾನ ಮಾಡಲಿದ್ದಾರೆ. ಪತ್ರಿಕಾ ವಿತರಕರಿಗೆ ಜರ್ಕಿನ್‌ಗಳನ್ನು ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಜಯವಾಣಿಯ ಗಂಗಾವತಿ ಆವೃತಿಯ ಸ್ಥಾನಿಕ ಸಂಪಾದಕ ಜಗನ್ನಾಥ ಆರ್.ದೇಸಾಯಿ, ಜಿಲ್ಲಾಧಿಕಾರಿ ನಿತೀಶ್, ಕೆ., ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ, ಎಸ್ಪಿ ಪುಟ್ಟಮಾದಯ್ಯ ಎಂ., ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸುರೇಶ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಚನ್ನಬಸವ ಬಾಗಲವಾಡ ಆಗಮಿಸಲಿದ್ದಾರೆ ಎಂದರು.
ಮಾಹಿತಿ ಹಕ್ಕು ಆಯೋಗದ ಆಯುಕ್ತರಾಗಿ ನಿಯುಕ್ತಿಗೊಂಡಿರುವ ಬಿ.ವೆಂಕಟಸಿಂಗ್ ವಿಶೇಷ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜೀವಮಾನ ಸಾಧನೆ ಪ್ರಶಸ್ತಿಯನ್ನು ಹಿರಿಯ ಉಪ ಸಂಪಾದಕ ರಘುನಾಥ ರೆಡ್ಡಿ ಇವರಿಗೆ ಪ್ರದಾನ ಮಾಡಲಾಗುತ್ತದೆ. ವಿವಿಧ ವಾರ್ಷಿಕ ದತ್ತಿ ಪ್ರಶಸ್ತಿಗಳಿಗೆ ಪತ್ರಕರ್ತ ಚಂದ್ರಕಾಂತ ಮಸಾನಿ, ಬಿ.ರಾಜು, ಕ್ಯಾಮಾರ ಮ್ಯಾನ್‌ಗಳಾದ ಅಬ್ದುಲ್ ಖಾದಾರ, ಕೆ. ಶ್ರೀನಿವಾಸ ಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರದಾನ ಕಾರ್ಯದರ್ಶಿ ವೆಂಕಟೇಶ ಹೂಗಾರ, ಪತ್ರಕರ್ತರಾದ ಚನ್ನಬಸವ ಬಾಗಲವಾಡ, ಶ್ರೀಕಾಂತ ಸಾವೂರು, ಖಾನಸಾಬ ಮೋಮಿನ್, ಕೆ.ಸಣ್ಣ ಈರಣ್ಣ, ಎಂ.ಜಯರಾಂ ಇದ್ದರು.