ಯದ್ದಲದೊಡ್ಡಿ ಗ್ರಾಮದಲ್ಲಿ ಆಕ್ಸ್‌ಫರ್ಡ್ ಕಾಲೇಜ್‌ನಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮವನ್ನು ಯದ್ದಲದೊಡ್ಡಿ ಮಹಾಲಿಂಗಸ್ವಾಮೀಜಿ ಉದ್ಘಾಟಿಸಿದರು. ಆಕ್ಸ್‌ಫರ್ಡ್ ಕಾಲೇಜಿನ ಅಧ್ಯಕ್ಷ ಎನ್.ಸತ್ಯನಾರಾಯಣ ಶ್ರೇಷ್ಠಿ, ಗ್ರಾಪಂ ಅಧ್ಯಕ್ಷೆ ಅಂಬಿಕಾ ಭೀಮಣ್ಣ, ಎನ್ನೆಸ್ಸೆಸ್ಸ್ ಸಂಯೋಜನಾಧಿಕಾರಿ ನಾಗೇಶ ಇದ್ದರು. 
ರಾಯಚೂರು

ವ್ಯಕ್ತಿತ್ವ ವಿಕಸನಕ್ಕೆ ಎನ್ನೆಸ್ಸೆಸ್ಸ್ ಶಿಬಿರ ಸಹಕಾರಿ

ಪ್ರಮುಖ ಮುಖ್ಯಾಂಶಗಳು

  • ಎನ್ನೆಸ್ಸೆಸ್ಸ್ ಶಿಬಿರ

ವ್ಯಕ್ತಿತ್ವ ವಿಕಸನಕ್ಕೆ ಎನ್ನೆಸ್ಸೆಸ್ಸ್ ಶಿಬಿರ ಸಹಕಾರಿ

ಸಿಂಧನೂರು: ಸೇವೆಯೇ ಧರ್ಮ ಎಂಬ ಸಂದೇಶವನ್ನು ವಿದ್ಯಾರ್ಥಿ-ಯುವಜನರು ಅಳವಡಿಸಿಕೊಳ್ಳಬೇಕು. ಸಮಾಜಮುಖಿ ಚಿಂತನೆಗೆ ದಾರಿ ತೋರಿಸುವುದೇ ಎನ್ನೆಸ್ಸೆಸ್ಸ್ ಎಂದು ಹಳೇಕೋಟೆ ಹಾಗೂ ಬಳಗಾನೂರು ಮಠದ ಸಿದ್ಧಬಸವ ಸ್ವಾಮೀಜಿ ಹೇಳಿದರು.
ತಾಲೂಕಿನ ಯದ್ದಲದೊಡ್ಡಿ ಗ್ರಾಮದಲ್ಲಿ ಆಕ್ಸ್‌ಫರ್ಡ್ ಕಾಲೇಜ್‌ನಿಂದ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮಾತನಾಡಿದರು. ಎನ್ನೆಸ್ಸೆಸ್ಸ್ ಗಾಂಧೀಜಿ ಪರಿಕಲ್ಪನೆಯಾಗಿತ್ತು. ಗ್ರಾಮಗಳ ಸ್ವಚ್ಛತೆ ಮತ್ತು ಜಾಗೃತಿ ಮೂಡಿಸುವ ಕೆಲಸ ಎನ್ನೆಸ್ಸೆಸ್ಸ್‌ನಿಂದ ಸಾಧ್ಯ.
ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಸೇವಾ ಮನೋಭಾವ, ನಾಯಕತ್ವ ಗುಣ ಬೆಳೆಸುವ ಜತೆಗೆ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದರು. ಸಂಸ್ಥೆಯ ಅಧ್ಯಕ್ಷ ಹಾಗೂ ರಾಯಚೂರು ವಿವಿ ವಿದ್ಯಾ ವಿಷಯಕ್ ಪರಿಷತ್ ಸದಸ್ಯ ಎನ್.ಸತ್ಯನಾರಾಯಣ ಶ್ರೇಷ್ಠಿ ಮಾತನಾಡಿ, ವಿದ್ಯಾರ್ಥಿಗಳು ದೇಶ ಕಟ್ಟುವ ಕಾರ್ಯದಲ್ಲಿ ಐಕ್ಯತೆಯಿಂದ ತೊಡಗಬೇಕು ಎಂದು ತಿಳಿಸಿದರು. ಗ್ರಾಪಂ ಅಧ್ಯಕ್ಷೆ ಅಂಬಿಕಾ ಭೀಮಣ್ಣ ಧ್ವಜಾರೋಹಣ ನೆರವೇರಿಸಿದರು.
ರಾಯಚೂರು ಮಹರ್ಷಿ ವಾಲ್ಮೀಕಿ ವಿವಿ ವಿದ್ಯಾ ವಿಷಯಕ್ ಪರಿಷತ್ ಸದಸ್ಯ ಅನಿಲ್‌ಕುಮಾರ್, ಎನ್ನೆಸ್ಸೆಸ್ಸ್ ಸಂಯೋಜನಾಧಿಕಾರಿ ನಾಗೇಶ, ಕಾರ್ಯಕ್ರಮಾಧಿಕಾರಿ ಜಿ.ಎಸ್.ಬಿರಾದಾರ್, ಪಾಟೀಲ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಸಿ.ಪಾಟೀಲ್, ನೊಬೆಲ್ ಪದವಿ ಕಾಲೇಜಿನ ಅಧ್ಯಕ್ಷ ಪರಶುರಾಮ ಮಲ್ಲಾಪುರ, ಆಕ್ಸ್‌ಫರ್ಡ್ ಕಾಲೇಜಿನ ಆಡಳಿತಾಧಿಕಾರಿ ಸಂಜೀವಕುಮಾರ, ಪ್ರಾಚಾರ್ಯ ಶ್ರೀಕಾಂತ, ಗ್ರಾಪಂ ಮಾಜಿ ಸದಸ್ಯ ಎಂ.ಗಂಗಣ್ಣ ಇದ್ದರು.