ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಮಯಕ್ಕೆ ಸರಿಯಾ ಆಗಮಿಸಿಲ್ಲ ಎಂಬ ಕಾರಣಕ್ಕೆ ರಾಯಚೂರಿನ ಪಂ.ಸಿದ್ದರಾಮ ಜಂಬಲದಿನ್ನಿ ರಂಗಂಮದಿರದಲ್ಲಿ ಕಾರ್ಯಕ್ರಮದ ವೇದಿಕೆಯ ಮೇಲೆಯೇ ಭೋವಿ ಸಮಾಜದವರು ಪ್ರತಿಭಟನೆ ನಡೆಸಿದರು.
- ಸರಳವಾಗಿ ಜಯಂತಿ ಆಚರಣೆ
- ಭೋವಿ ಸಮಾಜದಿಂದ ಪ್ರತಿಭಟನೆ
- ಸರಳವಾಗಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ
ರಾಯಚೂರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಅಧಿಕಾರಿಗಳು ಆಗಮಿಸಿಲ್ಲ ಎಂಬ ಕಾರಣಕ್ಕೆ ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಂಮದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಶಿವಯೋಗಿಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದ ವೇದಿಕೆಯ ಮೇಲೆಯೇ ಭೋವಿ ಸಮಾಜದವರು ಬುಧವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸಮಯಕ್ಕೆ ಸರಿಯಾಗಿ ಅಧಿಕಾರಿಗಳು ಆಗಮಿಸದ ಹಿನ್ನೆಲೆಯಲ್ಲಿ ಸಮಾಜದ ಮುಖಂಡರು ಏಕಾಏಕಿ ಪ್ರತಿಭಟನೆಗೆ ಮುಂದಾದರು. ಇದರಿಂದ ಕೆಲ ಕಾಲ ರಂಗಮಂದಿರದಲ್ಲಿ ಗೊಂದಲದ ವಾತಾವಾರಣ ನಿರ್ಮಾಣವಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು ಹಾಗೂ ಜಿಲ್ಲಾ ಪಂಚಾಯತ್‌ನಿಂದ ಅಧಿಕಾರಿಗಳು ಯಾರೂ ಬಂದಿಲ್ಲ. ಸಮಾಜದವರ ವೇದಿಕೆಯ ಮೇಲೆ ಕುಳಿತುಕೊಳ್ಳದೆ ಕಾರ್ಯಕ್ರಮದಿಂದ ಹೊರ ನಡೆದ ಪರಿಣಾಮ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಎಸ್ಪಿ ಅರುಣಾಂಗ್ಶು ಗಿರಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಸೇರಿದಂತೆ ಇತರೆ ಗಣ್ಯರು ಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ, ನಂತರ ಜ್ಯೋತಿ ಬೆಳೆಗಿಸಿದರು. ಇದಕ್ಕೂ ಮುಂಚೆ ನಗರದ ಆಶಾಪೂರು ರಸ್ತೆಯ ಶಿವಯಗಿ ಸಿದ್ಧರಾಮೇಶ್ವರ ವೃತ್ತದಿಂದ ಅದ್ದೂರಿಯಾಗಿ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತೆ ಸಂತೋಷ ರಾಣಿ, ಸಿಪಿಐಗಳಾದ ಉಮೇಶ ಕಾಂಬಳೆ, ನಾಗರಾಜ ಮೇಕಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.