ರಾಯಚೂರು ಕುಡಿಯುವ ನೀರು ಕೇಳಿದ ವಿಚಾರಕ್ಕೆ ಜಿಲ್ಲೆಯ ಸರ್ಜಾಪುರು ಗ್ರಾಮಸ್ಥರ ಮೇಲೆ ಪಿಡಿಓ 80 ಜನರ ಮೇಲೆ ಪ್ರಕರಣ ದಾಖಲು ಮಾಡಿದ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ತನಖೆ ಮಾಡಲು ಜಿಪಂ ಸಿಇಓ ಈಶ್ವರ ಕುಮಾರ ಕಾಂದೊಗೆ ಸೂಚನೆ ನೀಡಲಾಗಿದೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪಂಚಾಯಿತಿ ಕಚೇರಿಗೆ ತೆರಳಿ ಪಿಡಿಓ ಮೇಲೆ ಹಲ್ಲೆ ಮಾಡಲಾಗಿದೆಂದು ಅಧಿಕಾರಿಗಳು ಗ್ರಾಮದ 80 ಕ್ಕೂ ಅಧಿಕ ಜನರ ಮೇಲೆ ಪ್ರಕರಣ ದಾಖಲು ಮಾಡಿರುವುದು ಸರಿಯಾದ ಕ್ರಮವಲ್ಲ. ಗ್ರಾಮಸ್ಥರು ನೀರಿಗಾಗಿ ಅಧಿಕಾರಿ ಮೇಲೆ ಹಲ್ಲೆ ಮಾಡಲ್ಲ. ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ತನಿಖೆ ಮಾಡಿ ಅಧಿಕಾರಿ ತಪ್ಪು ಮಾಡಿದರೆ ಕ್ರಮವಾಗುವುದರ ಜತೆಗೆ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಮಾಡಲಾಗಿದ್ದು, ಸರಿಯಾದ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ನೋಟಿಸ್ ನೀಡಲು ಜಿಲ್ಲಾ ಪಂಚಾಯತ್ ಸಿಇಓಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಜಾಲದರೆ ಯೋಜನೆಯನ್ನು ಶೀಘ್ರವಾಗಿ ಕಾಮಗಾರಿ ಪೂರ್ಣ ಗೊಳಿಸಲು ಸೂಚನೆ ನೀಡಲಾಗಿದೆ. ಅತ್ತನೂರು ಗ್ರಾಮದಲ್ಲಿ ಸುಮಾರು ವರ್ಷಗಳಿಂದ ನೀರಿನ ಸಮಸ್ಯೆ ಇದೆ ಇದನ್ನು ಈ ಬಾರಿ ಬೇಸಿಗೆಯಲ್ಲಿ ಪರಿಹಾರ ನೀಡಲಾಗುತ್ತದೆ. ಈ ಬಾರಿ ಬೇಸಿಗೆಯಲ್ಲಿ ಜಿಲ್ಲಾಡಳಿತದಿಂದ 53 ಗ್ರಾಮಗಳಲ್ಲಿ ತೀವ್ರವಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು, ಖಾಸಗಿ ಟ್ಯಾಂಕರ್ ಮೂಲಕ ನೀರು ಸೊರಬರಾಜು ಮಾಡಲು ಸೂಚನೆ ನೀಡಲಾಗಿದೆ. ಕಳೆದ ವರ್ಷದಲ್ಲಿ ಟ್ಯಾಂಕರ್ ಬಾಡಿಕೆ ಸಮಸ್ಯೆ ಆಗಿದೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜತೆಗೆ ಮಾತನಾಡಲಾಗಿದ್ದು, ಒಂದು ವಾರದಲ್ಲಿ ಬಾಕಿ ಬಿಲ್ ಪಾವತಿ ಮಾಡಲಾಗುತ್ತದೆ.
ರಾಯಚೂರು ನಗರದ ಸೋರಬರಾಜು ಮಾಡುವ ನೀರಿನ ಪೈಪ್ ಲೈನ್ ಲಿಕೇಜ್‌ಗೆ ಸಂಬಂಧಿಸಿದಂತೆ ಅನೇಕ ಕಡೆ ಪಾಲಿಕೆಯಿಂದ ಅಧಿಕಾರಿಗಳು ಕಾರ್ಯ ನಿರ್ವಹಣೆ ಮಾಡಿದ್ದಾರೆ. ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಹಂಪಯ್ಯ ಸಾಹುಕಾರ, ಬಸನಗೌಡ ದದ್ದಲ್, ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ ಇದ್ದರು.