ದೇವದುರ್ಗದಲ್ಲಿ ಬಿಇಒ ಮಲ್ಲಿಕಾರ್ಜುನಗೆ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ ಮನವಿ ಸಲ್ಲಿಸಿತು.. ತಾಲೂಕು ಅಧ್ಯಕ್ಷೆ ಮರಿಯಮ್ಮ, ಕಾರ್ಯದರ್ಶಿ ಶ್ರೀಲೇಖಾ, ಮುಖಂಡರಾದ ಶೋಭಾ, ಮಲ್ಲಮ್ಮ, ಮಂಜುಳಾ ಹಾಗೂ ಸಿಐಟಿಯು ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ ಇದ್ದರು.
ದೇವದುರ್ಗ: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ಬಿಇಒ ಮಲ್ಲಿಕಾರ್ಜುನಗೆ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ (ಸಿಐಟಿಯು ಸಂಯೋಜಿತ) ಶುಕ್ರವಾರ ಮನವಿ ಸಲ್ಲಿಸಿತು.
ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಅಡುಗೆದಾರರು, ಅಡುಗೆಯವರು ಹಾಗೂ ಅಡುಗೆ ಸಹಾಯಕರಾಗಿ ಕೆಲಸ ಮಾಡುವ ಬಿಸಿಯೂಟ ನೌಕರರು ಹಲವು ಸಮಸ್ಯೆಗಳಿಂದ ನರಳುತ್ತಿದ್ದಾರೆ. ಬೇಡಿಕೆ ಈಡೇರಿಸುವಂತೆ ಹಲವು ವರ್ಷಗಳಿಂದ ಹೋರಾಟ ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಎಲ್ಲ ನೌಕರರಿಗೆ ಕನಿಷ್ಠ ವೇತನ ಕೊಡಬೇಕು. ನಾಲ್ಕನೇ ದರ್ಜೆ ನೌಕರರು ಎಂದು ಸೇವೆ ಕಾಯಂಗೊಳಿಸಬೇಕು. ಬೆಲೆ ಏರಿಕೆ ತಕ್ಕಂತೆ ಸಂಬಳ ಹೆಚ್ಚಳ ಮಾಡಬೇಕು. ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯಬೇಕು. ನಿರ್ಲಕ್ಷ್ಯ ಮಾಡಿದರೆ ಬಿಸಿಯೂಟ ಬಂದ್ ಮಾಡಿ ಫೆ.12ರಂದು ಸಾರ್ವತ್ರಿಕ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು