ಸಿಂಧನೂರಿನ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮ ನಡೆಯಿತು. ತಾಯಿ-ಮಕ್ಕಳ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಕಾವೇರಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ, ಎಫ್‌ಡಬ್ಲ್ಯು ಕೌನ್ಸಲರ್ ಸೀನಿಯರ್ ನಸಿರ್ಂಗ್ ಆಫೀಸರ್ ನಿರ್ಮಲಾ ಇತರರಿದ್ದರು.
- ವೈದ್ಯಾಧಿಕಾರಿ ಡಾ. ಕಾವೇರಿ ಅಭಿಮತ
- ಸಿಂಧನೂರು ವಿಶ್ವ ಜನಸಂಖ್ಯಾ ದಿನಾಚರಣೆ
ಸಿಂಧನೂರು: ಜನಸಂಖ್ಯಾ ಸ್ಫೋಟದಿಂದ ಸೃಷ್ಟಿಯಾಗುವ ಸಮಸ್ಯೆಗಳ ಬಗ್ಗೆ ಯುವಜನರು ಅರಿತುಕೊಳ್ಳವುದು ಬಹಳ ಮುಖ್ಯವಾಗಿದೆ ಎಂದು ತಾಯಿ-ಮಕ್ಕಳ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಕಾವೇರಿ ಹೇಳಿದರು.
ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವಿನ ಆರೋಗ್ಯಕರ ಅಂತರ ಕಾಪಾಡುವುದರಿಂದ ತಾಯಿ ಮತ್ತು ಮಕ್ಕಳ ಆರೋಗ್ಯ ವೃದ್ಧಿಸುವುದರೊಂದಿಗೆ ಅನಗತ್ಯ ಗರ್ಭಧಾರಣೆಗಳನ್ನು ತಡೆಗಟ್ಟಬಹುದು ಮತ್ತು ಜನಸಂಖ್ಯಾ ಸ್ಫೋಟದ ಪ್ರತಿಕೂಲತೆಯನ್ನು ಅರಿಯುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ ಮಾತನಾಡಿ, ಯುವಜನರು ದೇಶದ ಸಂಪತ್ತು. ಅವರು ತಮ್ಮ ಮಾನಸಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಲು ಮೊಬೈಲ್‌ನಿಂದ ದೂರವಿರಬೇಕು. ಜನಸಂಖ್ಯೆ ನಿಯಂತ್ರಣದಲ್ಲಿ ಕುಟುಂಬ ಕಲ್ಯಾಣ ಇಲಾಖೆಯು ಜನರಿಗೆ ಸೂಕ್ತ ಮಾಹಿತಿ ಮತ್ತು ವೈದ್ಯಕೀಯ ಸೇವೆಗಳನ್ನು ನೀಡಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಎಫ್‌ಡಬ್ಲ್ಯು ಕೌನ್ಸಲರ್ ಸೀನಿಯರ್ ನಸಿರ್ಂಗ್ ಆಫೀಸರ್ ನಿರ್ಮಲಾ, ಸಿಬ್ಬಂದಿ ನಿಂಗಮ್ಮ, ನಬಿನಾ, ಪಾರ್ವತಿ ಇದ್ದರು.