ramesh-kulakrni 
ರಾಯಚೂರು

ಜು.4 ರಂದು ಪ್ರತಿಭಾ ಪುರಸ್ಕಾರ ಹಾಗೂ ವಿಪಶ್ರೀ ಪ್ರಶಸ್ತಿ ಪ್ರದಾನ

ರಾಯಚೂರು ಜಿಲ್ಲಾ ಬ್ರಾಹ್ಮಣ ಮಹಾ ಸಭಾದಿಂದ ವಿಪ್ರೋತ್ಸವ-2026, ಪ್ರತಿಭಾ ಪುರಸ್ಕಾರ ಹಾಗೂ ವಿಪಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜು.04 ರಂದು ಸಂಜೆ 5 ಗಂಟೆಗೆ ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿದೆಂದು ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿ ರಮೇಶ ಕುಲಕರ್ಣಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2025-26 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ , ಪಿಯುಸಿ ಪರೀಕ್ಷೆಗಳಲ್ಲಿ ಶೇ.75 ಕ್ಕಿಂತ ಹೆಚ್ಚು ಅಂಕ ಪಡೆದ 120 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮತ್ತು ಮಹಿಳಾ ವಿಭಾಗದಲ್ಲಿ ಉಷಾಬಾಯಿ ಶ್ರೀ ನಿವಾಸರಾವ್ ದೇಸಾಯಿ ಅವರಿಗೆ ವಿಪ್ರ ಶ್ರೀಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕಾರ್ಯಕ್ರಮವನ್ನು ಮಾಜಿ ಸಚಿವ ದಿನೇಶ ಗುಂಡುರಾವ್ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಎನ್.ಎಸ್.ಬೋಸರಾಜ, ಸಂಸದ ಜಿ.ಕುಮಾರನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ಎಂಎಲ್ಸಿ ಎ.ವಸಂತಕುಮಾರ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್.ರಘುನಾಥ, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸುಗೋಡು ಜಯಸಿಂಹ, ಮಹಾಪೋಷಕ ನರಸಿಂಗರಾವ್ ದೇಶಪಾಂಡೆ ಸೇರಿ ಅನೇಕರು ಆಗಮಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ನರಸಿಂಹರಾವ್ ದೇಶಪಾಂಡೆ, ಪ್ರಾಣೇಶ ಮುತಾಲಿಕ, ವೇಣುಗೋಪಾಲ ಇನಾಂದಾರ ,ರಾಮರಾವ್ ಗಣೇಕಲ್, ಸುಧೀರ, ಶ್ರೀನಿವಾಸ ದೇಸಾಯಿ ಇದ್ದರು.