ಮಸ್ಕಿ ತಾಲೂಕಿನ ಕೋಳಬಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ತಾಪಂ ಇಒ ಅಮರೇಶ ಯಾದವ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಾಂತಪ್ಪ, ಮುಖ್ಯಶಿಕ್ಷಕ ಭರತೇಶ ಇತರರಿದ್ದರು.
- ಎಸ್ಸೆಸ್ಸೆಲ್ಸಿ ಪರೀಕ್ಷೆ
- ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟ
- ವಿದ್ಯಾರ್ಥಿಗಳೊಂದಿಗೆ ಸಂವಾದ
- ತಾಪಂ ಇಒ ಅಮರೇಶ ಯಾದವ ಕಿವಿಮಾತು
- ಪ್ರಶ್ನೆ ಪತ್ರಿಕೆ ಬಿಡಿಸುವ ಮೂಲಕ ಪರೀಕ್ಷೆಗೆ ಸಿದ್ಧತೆ
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಿ
ಮಸ್ಕಿ: ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದ್ದು, ಸತತ ಪರಿಶ್ರಮದಿಂದ ಓದಿ ಉತ್ತಮ ಅಂಕ ಗಳಿಸಬೇಕು ಎಂದು ತಾಪಂ ಇಒ ಅಮರೇಶ ಯಾದವ ಕಿವಿಮಾತು ಹೇಳಿದರು.
ತಾಲೂಕಿನ ಕೋಳಬಾಳ ಸರ್ಕಾರಿ ಪ್ರೌಢಶಾಲೆಗೆ ಸೋಮವಾರ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 10ನೇ ತರಗತಿ ವಿದ್ಯಾರ್ಥಿಗಳ ಕಲಿಕೆ ಕುರಿತು ಶಿಕ್ಷಕರೊಂದಿಗೆ ಚರ್ಚಿಸಿದರು. ಸ್ಮಾರ್ಟ್‌ಕ್ಲಾಸ್ ಕಲಿಕೆಯ ಕುರಿತು ಮಾಹಿತಿ ನೀಡಿದರು.
ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆ ಬಿಡಿಸುವ ಮೂಲಕ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಬೇಕು ಎಂದರು. ನಂತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದರು. ನರೇಗಾ ಯೋಜನೆಯಡಿ ನಿರ್ಮಿಸಿದ ಶಾಲಾ ಶೌಚಗೃಹ ಪರಿಶೀಲಿಸಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಾಂತಪ್ಪ, ಮುಖ್ಯಶಿಕ್ಷಕ ಭರತೇಶ, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.