ಮಸರಕಲ್ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ವೈದ್ಯಾಧಿಕಾರಿ ಶಂಶುದ್ದೀನ್ ಮಕ್ಕಳ ಆರೋಗ್ಯ ತಪಾಸಣೆ ಮಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಮ್ಮ, ಸಿಬ್ಬಂದಿ ಜಯಲಕ್ಷ್ಮೀ, ಮಲ್ಲಯ್ಯ, ಅನ್ನಪೂರ್ಣಾ ಇದ್ದರು. 
ರಾಯಚೂರು

ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯ ಶಿಕ್ಷಣ

ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ

ದೇವದುರ್ಗ: ಮನೆ, ಮೈದಾನ, ಪರಿಸರ ಸ್ವಚ್ಛವಾಗಿದ್ದರೆ ರೋಗಗಳಿಂದ ದೂರವಿರಬಹುದು. ಆದ್ದರಿಂದ ವಿದ್ಯಾರ್ಥಿಗಳು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ವೈದ್ಯಾಧಿಕಾರಿ ಶಂಶುದ್ದೀನ್ ಹೇಳಿದರು.
ತಾಲೂಕಿನ ಮಸರಕಲ್ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಶಿಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿದರು.
14 ವರ್ಷದ ನಂತರ ದೇಹದಲ್ಲಿ ಬದಲಾವಣೆ ಆಗುವುದು ಪ್ರಕೃತಿ ನಿಯಮ. ಈ ಹಂತದಲ್ಲಿ ಆರೋಗ್ಯ ಜಾಗೃತಿ ಅಗತ್ಯ. ಕುಷ್ಠರೋಗ ಸಾಂಕ್ರಾಮಿಕ ಕಾಯಿಲೆಯಾಗಿದ್ದು, 1873ರಲ್ಲಿ ಡಾ.ಹೆನ್ಸನ್ ಎಂಬ ವಿಜ್ಞಾನಿ ಕಂಡುಹಿಡಿದರು.
ಇದು ಮೈಕೋ ಬ್ಯಾಕ್ಟೀರಿಯಂ ಲೆಪ್ರೇ ಎಂಬ ಸೂಕ್ಷ್ಮಣುವಿನಿಂದ ಬರುತ್ತದೆ. ಫೆ.13ರವರೆಗೆ ಅಭಿಯಾನ ನಡೆಯಲಿದೆ. ಕುಷ್ಠರೋಗ ಚರ್ಮ ಹಾಗೂ ನರಗಳಿಗೆ ಸಂಬಂಧಿಸಿದ್ದು, ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು ಎಂದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಮ್ಮ, ಸಿಬ್ಬಂದಿ ಜಯಲಕ್ಷ್ಮೀ, ಮಲ್ಲಯ್ಯ, ಅನ್ನಪೂರ್ಣಾ ಇತರರಿದ್ದರು.