ಕರೆಮ್ಮ ಜಿ.ನಾಯಕ 
ರಾಯಚೂರು

ನಗರೋತ್ಥಾನ ಯೋಜನೆಯಡಿ 36 ಕೋಟಿ ರೂ. ಪ್ರಸ್ತಾವನೆ

ಶ್ರೀನಾಥ

ಪ್ರಮುಖ ಮುಖ್ಯಾಂಶಗಳು

  • ಶಾಸಕಿ ಕರೆಮ್ಮ ಜಿ.ನಾಯಕ ಹೇಳಿಕೆ
  • ದೇವದುರ್ಗ ಶಾಸಕಿ ಸುದ್ದಿಗೋಷ್ಠಿ ಅನುದಾನ
ದೇವದುರ್ಗ: ಪಟ್ಟಣದಲ್ಲಿ ಎರಡನೇ ಹಂತದ ಒಳಚರಂಡಿ ನಿರ್ಮಾಣಕ್ಕಾಗಿ ನಗರೋತ್ಥಾನ ಯೋಜನೆಯಡಿ 36 ಕೋಟಿ ರೂ. ಕೋರಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರ ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊದಲ ಹಂತದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ದ್ವಿಪಥ, ರಸ್ತೆ ವಿಭಜಕ, ಬೀದಿದೀಪ ಅಳವಡಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಒಳಚರಂಡಿ ಜತೆಗೆ ಉತ್ತಮ ನಗರ ನಿರ್ಮಿಸುವ ಗುರಿ ಹೊಂದಲಾಗಿದೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಶಾಸಕರ ನಿಯೋಗ ಸಿಎಂ ಭೇಟಿ ಮಾಡಿ ಬರ ಘೋಷಣೆ ಮಾಡುವಂತೆ ಒತ್ತಾಯ ಮಾಡಲಾಗಿದೆ. ಈ ಕುರಿತು ಅಧಿವೇಶನದಲ್ಲೂ ಹೋರಾಟ ನಡೆಸಲಾಗುವುದು. ಮಲ್ಲಾಪುರ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದೇನೆ. ಮುಂದೆ ಇಂಥ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಬಸನಗೌಡ ದೇಸಾಯಿ, ಪ್ರಮುಖರಾದ ಅಮರೇಶ ಪಾಟೀಲ್, ಶರಣಪ್ಪ ಬಳೆ, ಶಾಲಂ ಉದ್ದಾರ, ಸಿದ್ದಣ್ಣ ಬಿ.ಗಣೇಕಲ್, ಹನುಮಂತ್ರಾಯ ಚಿಂತಲಕುಂಟಿ, ಶಮೀನಾ ಉದ್ದಾರ್, ಶಿವರಾಜ ಕಾಳೆ ಇತರರಿದ್ದರು.