ಮರಿಸ್ವಾಮಿ 
ರಾಯಚೂರು

ಇಂದು ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ರಾಚಯ್ಯ ಸ್ವಾಮಿ
ರಾಯಚೂರು
ನೀಟ್ ಪರೀಕ್ಷೆ ಪ್ರಶ್ನೆಸೋರಿಕೆ ವಿರೋಧಿಸಿ ದೆಹಲಿಯ ಜಂತರ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ ಖಂಡಿಸಿ ಜು.23 ರಂದು ಜಿಲ್ಲಾ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆಂದು ಯುವ ಘಟಕದ ಜಿಲ್ಲಾಧ್ಯಕ್ಷ ಮರಿಸ್ವಾಮಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಯುವಕರ ಮೇಲೆ ಸರ್ಕಾರ ದಾಳಿ ಮಾಡಿ ಹೋರಾಟ ತಡೆಯಲು ಹೊರಟಿರುವದು ಖಂಡನೀಯ. ಪಕ್ಷದ ನಾಯಕ ರಾಹುಲ್ ಗಾಂಧಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಇವರ ಸೂಚನೆ ಮೇರೆಗೆ ಹೋರಾಟ ನಡೆಯಲಿದೆ. ಈಗಾಗಲೇ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಆಹ್ವಾನಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಮಹ್ಮದ ಶಯನವಾಜ್, ಆರ್‌ಡಿಎ ಸದಸ್ಯೆ ಪ್ರತಿಭಾರೆಡ್ಡಿ, ಫಸಲ್ ಖಾನ್ ಇದ್ದರು.