ರಾಯಚೂರು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕಾಯ್ದೆಯನ್ನು ಶೇಡ್ಯೂಲ್ 9 ಕ್ಕೆ ಸೇರ್ಪಡೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ಮಾ.27 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಂ.ಆರ್.ಭೇರಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 101 ಜಾತಿಗಳ ಒಳ ಮೀಸಲಾತಿ ಜಾರಿ ಸಮರ್ಪಕ ಜಾರಿಯಾಗದೇ ಇರುವದರಿಂದ ಪರ ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಿದೆ. ಶೇ.56 ಮೀಸಲಾತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ರಾಜ್ಯ ಸರ್ಕಾರ 56 ಸಾವಿರ ಹುದ್ದೆಗಳ ನೇಮಕಾತಿ ಮುಂದಾಗಿದೆ. ಶೇ.15 ಮೀಸಲಾತಿಯಲ್ಲಿಯೂ ಒಳ ಮೀಸಲಾತಿ ಅನ್ವಯಿಸಿ ನೇಮಕಾತಿ ಮಾಡಬೇಕೆಂದರು.
101 ಜಾತಿಗಳಿಗೂ ಅನ್ಯಾಯವಾಗದಂತೆ ಒಳಮೀಸಲಾತಿ ಜಾರಿಗೊಳಿಸಬೆಕೆಂದರು. ಪಿಟಿಸಿಎಲ್ ಕಾಯ್ದೆ ತಿದ್ದುಪಡಿಯಾಗಿದ್ದರೂ ತೀರ್ಪು ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ಕಾನುನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಷಣ್ಮುಖಪ್ಪ ಘಂಟಿ, ವೈ.ನಾಗಪ್ಪ, ಖಾಜಪ್ಪ ಇದ್ದರು.