ಲಿಂಗಸುಗೂರು: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯನಾರಾಯಣ ಶೆಟ್ಟಿ ತಾಲೂಕಿನ ವಿವಿಧೆಡೆ ಮಂಗಳವಾರ ಭೇಟಿ ನೀಡಿದರು.
ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸ್ವಚ್ಛತೆ ಕಾಪಾಡುವಂತೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದರು. ಕರಡಕಲ್ಲ ಹೊರವಲಯದ ಮುರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೌಲಭ್ಯದ ಕಡೆ ಹೆಚ್ಚು ಗಮನ ಹರಿಸುವಂತೆ ಅಧಿಕಾರಿ ಷಡಕ್ಷರಿ ಹಾದಿಮನಿಗೆ ತಾಕೀತು ಮಾಡಿದರು. ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯ, ಹಟ್ಟಿ ಕೇಂದ್ರೀಯ ವಿದ್ಯಾಲಯ, ಮೇದಿನಾಪುರ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದರು.
ಬಿಇಒ ಸುಜಾತಾ ಹೂನೂರು, ಸಿಡಿಪಿಒ ನಾಗರತ್ನ, ಹನಮೇಶ ಇತರರಿದ್ದರು.