ದೇವದುರ್ಗದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಗೆ ರೈತ ಸಂಘ ಮನವಿ ಸಲ್ಲಿಸಿತು.ಮನವಿ ಸಲ್ಲಿಸಿತು. ತಾಲೂಕು ಅಧ್ಯಕ್ಷ ಕೆ.ಗಿರಿಲಿಂಗ ಸ್ವಾಮಿ, ಪ್ರಧಾನ ಕಾರ್ಯದರ್ಶಿ ದುರ್ಗಣ್ಣ ಇರಬಗೆರಾ, ರಮೇಶ ಇದ್ದರು.
ದೇವದುರ್ಗ: ಗಬ್ಬೂರು ಹೋಬಳಿಯ ಕೋಳೂರು ಗ್ರಾಮಕ್ಕೆ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಗೆ ರೈತ ಸಂಘ ಶುಕ್ರವಾರ ಮನವಿ ಸಲ್ಲಿಸಿತು.
ಕೋಳೂರು, ತಾಲೂಕಿನ ಕಟ್ಟಕಡೆಯ ಹಳ್ಳಿ. ಊರಿಗೆ ಬಸ್ ಸೌಕರ್ಯ ಇಲ್ಲದೆ ಗ್ರಾಮದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಕೋಳೂರಿನಿಂದ ಪಾದಯಾತ್ರೆ ಮೂಲಕ ಹೋಗಬೇಕಿದೆ. ಎರಡು ಕಿಮೀ ನಡೆದುಕೊಂಡು ಹೇಮನಾಳಕ್ಕೆ ಬಂದು ಅಲ್ಲಿಂದ ಗಬ್ಬೂರು, ದೇವದುರ್ಗಕ್ಕೆ ಹೋಗುವ ದುಸ್ಥಿತಿ ಎದುರಾಗಿದೆ.
ಬಸ್ ಸೌಲಭ್ಯ ಕಲ್ಪಿಸಲು ಗ್ರಾಮಸ್ಥರು, ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಶಾಸಕರ ಆದಿಯಾಗಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಮದರಕಲ್‌ನಿಂದ ಗೂಗಲ್ ಮತ್ತು ಗಬ್ಬೂರಿನಿಂದ ಗೂಗಲ್‌ಗೆ ಸಂಚರಿಸುವ ಬಸ್‌ಗಳು ಕೋಳೂರು ಮೂಲಕ ತೆರಳಲು ವ್ಯವಸ್ಥೆ ಮಾಡಬೇಕು. ಗ್ರಾಮಕ್ಕೆ ಸುಸಜ್ಜಿತ ರಸ್ತೆ ಹಾಗೂ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ತಾಲೂಕು ಅಧ್ಯಕ್ಷ ಕೆ.ಗಿರಿಲಿಂಗ ಸ್ವಾಮಿ, ಪ್ರಧಾನ ಕಾರ್ಯದರ್ಶಿ ದುರ್ಗಣ್ಣ ಇರಬಗೆರಾ, ರಮೇಶ ಇದ್ದರು.