ಲಿಂಗಸುಗೂರಿನ ತಾಲೂಕು ಆಸ್ಪತ್ರೆಯಲ್ಲಿ ನೂತನ ಆಂಬುಲೆನ್ಸ್ ಸೇವೆಗೆ ಶಾಸಕ ಮಾನಪ್ಪ ವಜ್ಜಲ್, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಚಾಲನೆ ನೀಡಿದರು
ಲಿಂಗಸುಗೂರು: ಕೆಕೆಆರ್‌ಡಿಬಿ ಯೋಜನೆಯಡಿ 90 ಲಕ್ಷ ರೂ. ವೆಚ್ಚದಲ್ಲಿ ಮೂರು ಆಂಬುಲೆನ್ಸ್‌ಗಳನ್ನು ಖರೀದಿಸಿ ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಆಂಬುಲೆನ್ಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದರು. ಲಿಂಗಸುಗೂರು ತಾಲೂಕು ಆಸ್ಪತ್ರೆ, ನಾಗರಹಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಈಚನಾಳ ಸರ್ಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಒದಗಿಸಲಾಗಿದೆ.
ತುರ್ತು ಸಂದರ್ಭದಲ್ಲಿ ಜನರನ್ನು ಆಸ್ಪತ್ರೆಗಳಿಗೆ ಸಾಗಿಸಲು ಅನುಕೂಲವಾಗಲಿದೆ. ಆಸ್ಪತ್ರೆಗಳಿಗೆ ಬೇಡಿಕೆಯಂತೆ ಅವಶ್ಯ ಉಪಕರಣಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು ಎಂದರು.
ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ, ಟಿಎಚ್‌ಒ ಡಾ.ಅಮರೇಶ ಪಾಟೀಲ್, ತಾಲೂಕು ನೋಡಲ್ ಅಧಿಕಾರಿ ಡಾ. ಶಿವಕುಮಾರ, ಮುಖ್ಯ ವೈದ್ಯಾಧಿಕಾರಿ ರುದ್ರಗೌಡ ಪಾಟೀಲ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಪಾಮಯ್ಯ ಮರಾರಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸನಗೌಡ ಮೇಟಿ, ಪುರಸಭೆ ಮುಖ್ಯಾಧಿಕಾರಿ ನಟರಾಜ, ಭೀಮಣ್ಣ ಹಿರೇಮನಿ, ಫಕೀರಪ್ಪ ಕುರಿ, ಚನ್ನಾರೆಡ್ಡಿ ಬಿರಾದಾರ ಇತರರಿದ್ದರು.