ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಚಾಲನೆ ನೀಡಿದರು. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ್ ನಾಯಕ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಾ, ರಾಜ್ಯ ಕಾರ್ಯದರ್ಶಿ ಡಾ.ಶಂಕರಗೌಡ ಎಸ್.ಪಾಟೀಲ್, ಪಾಲಿಕೆಯ ಉಪ ಆಯುಕ್ತೆ ಸಂತೋಷರಾಣಿ, ಪ್ರಮುಖರಾದ ಹಾಜಿಬಾಬು, ದೊಡ್ಡ ನಿಂಗಪ್ಪ, ಭೀಮರಾಜ ಹವಾಲ್ದಾರ್, ಹನುಮಂತ್ರಾಯ, ಆರೀಫ್ ಮಿಯಾ, ಸುರೇಶ ಕುರ್ಡಿ, ಪಂಪಾಪತಿ ಹೂಗಾರ, ಭೀಮೇಶ ನಾಯಕ ಇದ್ದರು. 
ರಾಯಚೂರು

ರಾಯಚೂರು ಉತ್ಸವ ಎರಡು ದಿನಗಳ ಸರ್ಕಾರಿ ನೌಕರರ ಕ್ರೀಡಾಕೂಟ,

ರಾಯಚೂರು ಎಡೆದೊರೆ ನಾಡು ರಾಯಚೂರು ಉತ್ಸವ ನಿಮಿತ್ತ ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ಗುರುವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಚಾಲನೆ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ್ ನಾಯಕ ಮಾತನಾಡಿ, ಪುರುಷರಿಗೆ ಪುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕ್ರಿಕೆಟ್, ಬ್ಯಾಸ್ಕೆಟ್‌ಬಾಲ್ ಇತರೆ ಗುಂಪು ಕ್ರೀಡೆಗಳು ಹಾಗೂ ವೈಯಕ್ತಿಕ ಕ್ರೀಡೆಗಳಾದ ಚೆಸ್, ಓಟ, ಈಜು, ಗುಂಡು ಎಸೆತ ಸೇರಿದಂತೆ ಇತರ ಕ್ರೀಡೆಗಳು ಹಾಗೂ ಮಹಿಳೆಯರಿಗೆ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್ ಇತರೆ ಗುಂಪು ಕ್ರೀಡೆಗಳ ಜೊತೆಗೆ ವೈಯಕ್ತಿಕ ಕ್ರೀಡೆಗಳಾದ ಚೆಸ್, ರನ್ನಿಂಗ್, ಈಜು, ಗುಂಡು ಎಸೆತ ಸೇರಿದಂತೆ ಇತರೆ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಾ, ರಾಜ್ಯ ಕಾರ್ಯದರ್ಶಿ ಡಾ.ಶಂಕರಗೌಡ ಎಸ್.ಪಾಟೀಲ್, ಪಾಲಿಕೆಯ ಉಪ ಆಯುಕ್ತೆ ಸಂತೋಷರಾಣಿ, ಪ್ರಮುಖರಾದ ಹಾಜಿಬಾಬು, ದೊಡ್ಡ ನಿಂಗಪ್ಪ, ಭೀಮರಾಜ ಹವಾಲ್ದಾರ್, ಹನುಮಂತ್ರಾಯ, ಆರೀಫ್ ಮಿಯಾ, ಸುರೇಶ ಕುರ್ಡಿ, ಪಂಪಾಪತಿ ಹೂಗಾರ, ಭೀಮೇಶ ನಾಯಕ ಸೇರಿದಂತೆ ಅನೇಕರು ಇದ್ದರು.