ಸಿರವಾರ ತಾಲೂಕಿನ ಹೀರಾ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಕುರಿತು ಗ್ರಂಥಪಾಲಕ ಬಸವರಾಜ ದೊಡ್ಮನಿ ಮಾಹಿತಿ ನೀಡಿದರು. 
ರಾಯಚೂರು

ಪುಸ್ತಕ ಓದುವುದರಿಂದ ಭವಿಷ್ಯಕ್ಕೆ ಅನುಕೂಲ

ಸಿರವಾರ: ಪ್ರಚಲಿತ ಘಟನೆಗಳು ತಿಳಿಯಬೇಕಾದರೆ ವಿದ್ಯಾರ್ಥಿಗಳು ನಿತ್ಯ ದಿನಪತ್ರಿಕೆಗಳನ್ನು ಓದಬೇಕು ಎಂದು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎಚ್.ಕೆ.ಧನ್ನೂರು ಹೇಳಿದರು. 
ತಾಲೂಕಿನ ಹೀರಾ ಗ್ರಾಮದ ಗ್ರಾಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂವಿಧಾನದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಂಥಾಲಯಕ್ಕೆ ಬಂದು ಪುಸ್ತಕ ಓದುವುದನ್ನು ರೂಢಿಸಿಕೊಳ್ಳಬೇಕು.
 ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಯಾವುದೇ ಪ್ರಯೋಜನವಿಲ್ಲ. ಆದರೆ ಪುಸ್ತಕ, ಪತ್ರಿಕೆಗಳನ್ನು ಓದುವುದರಿಂದ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂದರು. 
ಗ್ರಂಥಪಾಲಕ ಬಸವರಾಜ ದೊಡ್ಮನಿ, ಹೀರಾ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.