ಮುದಗಲ್ ರಸ್ತೆಯಲ್ಲಿ ಬಿಡಾಡಿ ದನಗಳಿರುವುದು.  
ರಾಯಚೂರು

ಮುದಗಲ್‌ನಲ್ಲಿ ಬಿಡಾಡಿ ದನಗಳ ಹಾವಳಿ

ಅಶೋಕ್ ಕುಮಾರ್ ಎನ್

ಮುದಗಲ್ : ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದ್ದು, ಪ್ರಮುಖ ರಸ್ತೆಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ದನಗಳು ಗುಂಪಾಗಿ ನಿಂತುಕೊಳ್ಳುತ್ತಿರುವುದರಿಂದ ಸಾರ್ವಜನಿಕರು ಆತಂಕದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ದನಗಳು ರಸ್ತೆಯಲ್ಲೇ ಇರುವುದರಿಂದ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಬಿಡಾಡಿ ದನಗಳಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಬಿಡಾಡಿ ದನಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದರೊಂದಿಗೆ ರಸ್ತೆಗೆ ಬಿಡುವ ಅವುಗಳ ಮಾಲೀಕರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಪುರಸಭೆ ಅಧಿಕಾರಿಗಳು ನಿಯಮಿತವಾಗಿ ಕಾರ್ಯಾಚರಣೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.