ಪಗಡದಿನ್ನಿ ಗ್ರಾಮದ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ನಿಮಿತ್ತ ವಿದ್ಯಾರ್ಥಿನಿಯರಿಂದ ಕುಂಭ ಮೆರವಣಿಗೆ ನಡೆಯಿತು.  
ರಾಯಚೂರು

ಶಿಕ್ಷಣಕ್ಕೆ 750 ಕೋಟಿ ರೂ. ಖರ್ಚು

ಪ್ರಮುಖ ಮುಖ್ಯಾಂಶಗಳು

  • ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ
  • ಸಿಂಧನೂರಿನಲ್ಲಿ ಪ್ರತಿಭಾ ಕಾರಂಜಿ
ಸಿಂಧನೂರು: ಪ್ರತಿವರ್ಷ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ನೀಡುತ್ತಿದ್ದು, ಅದರಲ್ಲಿ 750 ಕೋಟಿ ರೂ.ಯನ್ನು ಶೈಕ್ಷಣಿಕ ಉದ್ದೇಶಕ್ಕೆ ಖರ್ಚು ಮಾಡಲಾಗುತ್ತಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. 
ತಾಲೂಕಿನ ಪಗಡದಿನ್ನಿ ಗ್ರಾಮದ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಯರಮರಸ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲೂಕಿಗೆ 11 ಕರ್ನಾಟಕ ಪಬ್ಲಿಕ್ ಶಾಲೆಗಳು ಮಂಜೂರಾಗಿದ್ದು, 65 ಕೋಟಿ ವೆಚ್ಚದಲ್ಲಿ ಮಾದರಿಯಾಗುವಂತೆ ನಿರ್ಮಿಸಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ಈ ಶಾಲೆಗಳಲ್ಲಿ ಎಲ್‌ಕೆಜಿಯಿಂದ ದ್ವಿತೀಯ ಪಿಯುವರೆಗೆ ಒಂದೇ ಸೂರಿನಡಿ ಕಲಿಯಬಹುದಾಗಿದೆ ಎಂದರು. 
ಮೂರುಮೈಲ್‌ಕ್ಯಾಂಪಿನ ರಂಭಾಪುರಿ ಶಾಖಾಮಠದ ಸೋಮನಾಥ ಶಿವಾಚಾರ್ಯರು, ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ, ವೆಂಕಟಗಿರಿ ಕ್ಯಾಂಪಿನ ಸದಾನಂದ ಶರಣರು, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ ್ಡಬಸವರಾಜ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಬಿಇಒ ಬಸವಲಿಂಗಪ್ಪ ಇದ್ದರು.