ರಾಯಚೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಸ್ಪಿ ಅರುಣಾಂಗ್ಲು ಗಿರಿ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಎಚ್.ಎಸ್.ಸಾತ್ವಿಕ್ ಅಧ್ಯಕ್ಷತೆಯಲ್ಲಿ ಮಕ್ಕಳ ಅಪಹರಣ ಮತ್ತು ನಾಪತ್ತೆ ಕುರಿತು ಇಲಾಖೆಗಳೊಂದಿಗೆ ಸಭೆ ನಡೆಯಿತು.
ರಾಯಚೂರು ಇತ್ತೀಚಿನ ದಿನಗಳಲ್ಲಿ ಬಾಲಕಿಯರ ಹಾಗೂ ಯುವತಿ ಅಪಹರಣ ಮತ್ತು ನಾಪತ್ತೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸುವುದುಅಗತ್ಯವಾಗಿದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಲು ಗಿರಿ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಕ್ಕಳ ಅಪಹರಣ ಮತ್ತು ನಾಪತ್ತೆ ಕುರಿತು ಇಲಾಖೆಗಳೊಂದಿಗೆ ಹಮ್ಮಿಕೊಂಡ ಸಭೆಯಲ್ಲಿ ಮಾತನಾಡಿ, ಇಚೇಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳು ಮುಗಿದಿದ್ದು, ಬಾಲಕಿಯರರನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗುತ್ತಿರುವುದು ಕಂಡು ಬರುತ್ತಿದೆ. ಈ ಮೂರ್ನಾಲ್ಕು ತಿಂಗಳು ಮಕ್ಕಳು ಹೊರಗೆ ಹೆಚ್ಚು ಸಮಯ ಕಳೆಯುವ ಸಂದರ್ಭಗಳಲ್ಲಿ ಪಾಲಕರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು.
18 ವರ್ಷದೊಳಿಗಿನ ಬಾಲಕಿಯರು ಮೇಲೆ ಪೋಷಕರು ಹೆಚ್ಚಿನ ನಿಗಾವ ಹಿಸಬೇಕಾಗಿದೆ. ಮಕ್ಕಳಿಗೆ ಒಳ್ಳೆಯದು-ಕೆಟ್ಟದ ಬಗ್ಗೆ ಬುದ್ದಿವಾದ ಹೇಳಿ, ಅಪರಿಚಿತರೊಂದಿಗೆ ಮೇಲೆ ಪೋಷಕರು ಹೆಚ್ಚಿನ ನಿಗಾವಹಿಸಬೇಕಾಗಿದೆ. ಮಕ್ಕಳಿಗೆ ಒಳ್ಳೆಯದು-ಕೆಟ್ಟದ ಬಗ್ಗೆ ಸಂಪರ್ಕ ಬೆಳೆಸಬಾರದು ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಎಚ್.ಎಸ್.ಸಾತ್ವಿಕ್ ಸೇರಿ ಅನೇಕರು ಇದ್ದರು.