ಮಾನ್ವಿ ಬಾಲಕಿಯರ ಸರ್ಕಾರಿ ಪಿಯು ಕಾಲೇಜ್‌ನಲ್ಲಿ ಕಸಾಪ ತಾಲೂಕು ಘಟಕದಿಂದ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಕಾಂಗ್ರೆಸ್ ಹಿರಿಯ ಮುಖಂಡ ಎ.ಬಾಲಸ್ವಾಮಿ ಕೊಡ್ಲಿ ಉದ್ಘಾಟಿಸಿದರು. ನಿವೃತ್ತ ಉಪನ್ಯಾಸಕ ರೇವಣಸಿದ್ದಯ್ಯಸ್ವಾಮಿ, ಕಾಂಗ್ರೆಸ್ ಮುಖಂಡ ಜಿ.ನಾಗರಾಜ, ಕಸಾಪ ತಾಲೂಕು ಕಾರ್ಯದರ್ಶಿ ಲಕ್ಷ್ಮಣ ಜಾನೇಕಲ್ ಇತರರಿದ್ದರು. 
ರಾಯಚೂರು

ಅನ್ಯ ಭಾಷಿಕರೊಂದಿಗೆ ಕನ್ನಡ ಮಾತನಾಡಿ

ಶ್ರೀನಾಥ

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್ ಹಿರಿಯ ಮುಖಂಡ ಎ.ಬಾಲಸ್ವಾಮಿ ಕೊಡ್ಲಿ ಅಭಿಮತ
  • ಮಾನ್ವಿ ದತ್ತಿ ಉಪನ್ಯಾಸ ಕಾರ್ಯಕ್ರಮ
ಮಾನ್ವಿ: ರಾಜ್ಯದಲ್ಲಿರುವ ಅನ್ಯ ಭಾಷಿಕರ ಜತೆಗೆ ಕನ್ನಡ ಮಾತನಾಡುವ ಮೂಲಕ ನಮ್ಮ ನೆಲ, ಭಾಷೆ, ಸಂಸ್ಕೃತಿ ಬೆಳೆಸೋಣ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎ.ಬಾಲಸ್ವಾಮಿ ಕೊಡ್ಲಿ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪಿಯು ಕಾಲೇಜ್ ಸಭಾಂಗಣದಲ್ಲಿ ಕಸಾಪ ತಾಲೂಕು ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯದ ಸಾಹಿತಿಗಳನ್ನು, ಸಾಹಿತ್ಯ ಪ್ರಕಾರಗಳನ್ನು ಜನರಿಗೆ ಪರಿಚಯಿಸುವ ಜತೆ ನಾಡು, ನುಡಿ, ಜಲ, ಭಾಷೆ ರಕ್ಷಣೆ ವಿಚಾರದಲ್ಲಿ ಸದಾ ಹೋರಾಟ ನಡೆಸುತ್ತಿದೆ. ಬೇರೆ ರಾಜ್ಯದಿಂದ ಬಂದವರಿಗೆ ಬದುಕಲು ಅವಕಾಶ ನೀಡುವ ಮೂಲಕ ಕನ್ನಡಿಗರು ಸೌಹಾರ್ದತೆಗೆ ಹೆಸರಾಗಿದ್ದಾರೆ. ಮುಂದಿನ ದಿನಗಳಲ್ಲಿ ಕಸಾಪ ಗ್ರಾಮೀಣ ಜನಪದ ಸಾಹಿತ್ಯವನ್ನು ಜನಪದರನ್ನು ಪರಿಚಯಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.
ನಿವೃತ್ತ ಕನ್ನಡ ಉಪನ್ಯಾಸಕ ರೇವಣಸಿದ್ದಯ್ಯ ಹಿರೇಮಠ ಮಾತನಾಡಿ, ವ್ಯಕ್ತಿಯನ್ನು ಪರಿಪೂರ್ಣವಾಗಿಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುತ್ತದೆ. ಶಿಕ್ಷಣದಿಂದ ಮಾತ್ರ ಉನ್ನತ ಜೀವನ ಕಟ್ಟಿಕೊಳ್ಳಲು ಹಾಗೂ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದರು.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ತಾಯಪ್ಪ ಹೊಸೂರು, ಕಸಾಪ ತಾಲೂಕು ಅಧ್ಯಕ್ಷ ಶರಣಬಸವ ನೀರಮಾನ್ವಿ, ಕಾರ್ಯದರ್ಶಿ ಲಕ್ಷ್ಮಣ ಜಾನೇಕಲ್, ಬಾಲಕಿಯರ ಕಾಲೇಜಿನ ಪ್ರಾಚಾರ್ಯ ನಾಗಮಲ್ಲೇಶ, ಸ.ನೌ.ಸಂ. ಕಾರ್ಯದರ್ಶಿ ಹಂಪಣ್ಣ ಚಂಡೂರು, ಪ್ರಮುಖರಾದ ಮಹಿಮೂದಾಬೇಗಂ, ರವಿಶರ್ಮ, ಚನ್ನಬಸವ ಮಾಡಗಿರಿ ಉಪನ್ಯಾಸಕರು, ಹನುಮಂತ ಕೋಟೆ ಇದ್ದರು.