ಗೊರೇಬಾಳ ಕ್ಯಾಂಪಿನ ವಿರಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ರುದ್ರಮರಾಜು ರಘುರಾಮ ರಾಜು ಮತ್ತಿತರ ಭಕ್ತರಿದ್ದರು.  
ರಾಯಚೂರು

ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ

ಗೊರೇಬಾಳ: ನಾಗರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕ್ಯಾಂಪಿನ ವೀರಾಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು .

ಪೂಜಾರಿ ಮಲ್ಲಯ್ಯ ತಾತ, ಆಂಜನೇಯ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಕುಂಕು ಮಾರ್ಚನೆ ನೆರವೇರಿಸಿದರು. ಅಪಾರ ಸಂಖ್ಯೆಯ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.