ಸಿಂಧನೂರಿನಲ್ಲಿ ಭೀಮ್ ಅರ್ಮಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆ ತಾಲೂಕಾಧ್ಯಕ್ಷ ಪ್ರವೀಣ ದುಮತಿ, ಬೀರಪ್ಪ, ಪರಶುರಾಮ ಹಾಗೂ ವಿದ್ಯಾರ್ಥಿಗಳಿದ್ದರು. 
ರಾಯಚೂರು

ನೇಮಕಾತಿ ಪ್ರಕ್ರಿಯೆ ಶೀಘ್ರ ನಡೆಸಿ

ನರೇಶ್ ಕುಮಾರ್
ಸಿಂಧನೂರು: ರಾಜ್ಯಾದ್ಯಾಂತ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು ಆಗ್ರಹಿಸಿ ನಗರದಲ್ಲಿ ಭೀಮ್ ಅರ್ಮಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಅರುಣ್ ದೇಸಾಯಿಗೆ ಮನವಿ ಪತ್ರ ಸಲ್ಲಿಸಲಾಯಿತು.
ರಾಜ್ಯದಲ್ಲಿ 50 ಸಾವಿರ ಹುದ್ದೆ ಭರ್ತಿಗೆ ಸರ್ಕಾರದ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು. ಮೂರ‌್ನಾಲ್ಕು ವರ್ಷಗಳಿಂದ ವಿದ್ಯಾವಂತ ಯುವಜನರು ಉದ್ಯೋಗವಿಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.
ಕೇಂದ್ರ ಸರ್ಕಾರ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ, ಯಾವುದೇ ಉದ್ಯೋಗ ನೀಡದೆ ವಂಚಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದರು. 
ಸಂಘಟನೆ ತಾಲೂಕಾಧ್ಯಕ್ಷ ಪ್ರವೀಣ ದುಮತಿ, ಬೀರಪ್ಪ, ಪರಶುರಾಮ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.