ಮಾನ್ವಿ ತಾಲೂಕಿನ ಉಟಕನೂರು ಗ್ರಾಪಂ ಸಿಬ್ಬಂದಿಯ ವೇತನವನ್ನು ಕೂಡಲೇ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ತಾಲೂಕು ಘಟಕದಿಂದ ತಾಪಂ ಇಒ ದೀಪಾಗೆ ಮನವಿ ಸಲ್ಲಿಸಲಾಯಿತು. ಸಂಘ ತಾಲೂಕು ಅಧ್ಯಕ್ಷ ಅಂಬಣ್ಣ ನಾಯಕ, ಪ್ರಧಾನ ಕಾರ್ಯದರ್ಶಿ ಸುಭಾನ್ ಚಿಕ್ಕೋಟ್ನೆಕಲ್, ಮಹಮ್ಮದ್ ನೀರಮಾನ್ವಿ ಇದ್ದರು. 
ರಾಯಚೂರು

ಗ್ರಾಪಂ ಸಿಬ್ಬಂದಿ ಬಾಕಿ ವೇತನ ಪಾವತಿಸಿ

ಶ್ರೀನಾಥ

ಪ್ರಮುಖ ಮುಖ್ಯಾಂಶಗಳು

  • ವೇತನ ಬಾಕಿ

ಗ್ರಾಪಂ ಸಿಬ್ಬಂದಿ ಬಾಕಿ ವೇತನ ಪಾವತಿಸಿ

ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಮನವಿ

ಮಾನ್ವಿ: ತಾಲೂಕಿನ ಉಟಕನೂರು ಗ್ರಾಪಂ ಸಿಬ್ಬಂದಿಯ ತಡೆಹಿಡಿದ ವೇತನವನ್ನು ಕೂಡಲೇ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ತಾಲೂಕು ಘಟಕದಿಂದ ತಾಪಂ ಇಒ ದೀಪಾಗೆ ಗುರುವಾರ ಮನವಿ ಸಲ್ಲಿಸಲಾಯಿತು.
ಉಟಕನೂರು ಗ್ರಾಪಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಇಎಫ್‌ಎಂಎಸ್ ವೇತನ ಪಾವತಿ ಬಾಕಿ ಇದ್ದು, ಉಟಕನೂರು ಗ್ರಾಪಂನಲ್ಲಿ ಅವ್ಯವಹಾರ ನಡೆದಿದೆ ಎಂದು ಆ ಗ್ರಾಪಂಯ ಎಲ್ಲ ಸಿಬ್ಬಂದಿ ವೇತನ ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ಮೂರು ದಿನಗಳೊಳಗಾಗಿ ಸಿಬ್ಬಂದಿ ವೇತನವನ್ನು ಪಾವತಿಸಬೇಕು. ವಿಳಂಬವಾದಲ್ಲಿ ಗ್ರಾಪಂ ಕಚೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ತಾಲೂಕು ಅಧ್ಯಕ್ಷ ಅಂಬಣ್ಣ ನಾಯಕ, ಪ್ರಧಾನ ಕಾರ್ಯದರ್ಶಿ ಸುಭಾನ್ ಚಿಕ್ಕೋಟ್ನೆಕಲ್, ಮಹಮ್ಮದ್ ನೀರಮಾನ್ವಿ ಇನ್ನಿತರರಿದ್ದರು.