ಅಧ್ಯಕ್ಷೆ ಮೋನಿಕಾ  
ರಾಯಚೂರು

ಆಗಸ್ಟ್ 01 ರಂದು ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ

ರಾಚಯ್ಯ ಸ್ವಾಮಿ
ರಾಯಚೂರು ಮೋನಿಕಾ ನೃತ್ಯ ಕಲಾ ಸಂಸ್ಥೆಯ17ನೇ ವಾರ್ಷಿಕೋತ್ಸವದ ಅಂಗವಾಗಿ ಆಗಸ್ಟ್ 01 ರಂದು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಮೋನಿಕಾ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಪರ್ಧೆಯಲ್ಲಿ ರಾಜ್ಯ ಸೇರಿದಂತೆ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಕಲಾವಿದರು ಆಗಮಿಸುವ ನಿರೀಕ್ಷೆಯಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕಲಾ ಮಯೂರಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ನೃತ್ಯ ಸ್ಪರ್ಧೆಯಲ್ಲಿ ಸೀನಿಯರ್ ಸೋಲೋ, ಜೂನಿಯರ್ ಸೋಲೋ, ಡುಯೇಟ್ ನೃತ್ಯ ವಿಭಾಗಗಳಿದ್ದು, ವಿಜೇತರಿಗೆ 70 ಸಾವಿರ ರೂ. ನಗದು ಬಹುಮಾನವನ್ನು ನೀಡಲಾಗುತ್ತದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಂಗ್ರೆಸ್ ಯುವ ಮುಖಂಡ ರವಿಬೋಸರಾಜು ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಚಂದ್ರಶೇಖರ ಮಿರ್ಜಪೂರು, ನಾಗವೇಣಿ ಪಾಟೀಲ್, ರಾಮಾಚಾರಿ, ಚಂದ್ರಶೇಖರ ಕುರ್ಡಿ, ಅನಿತಾ ಸಿರವಾರ, ಮಂಜುಳಾ ಅವದೂತ, ವೀಣಾ ಸೇರಿ ಅನೇಕರು ಆಗಮಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ರಂಗಸ್ವಾಮಿ, ಸಂಧ್ಯಾ, ಆನಂದ ಇದ್ದರು.