ಮಾನ್ವಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ವಾಸವಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು, ಆರ್. ಮುತ್ತುರಾಜ್ ಶಟ್ಟಿ, ಆರ್.ದ್ವಾರಕನಾಥ ಶೆಟ್ಟಿ, ಡಿ. ರಾಘವೇಂದ್ರ ಶೆಟ್ಟಿ, ಆರ್.ಪುರುಷೋತ್ತಮ ಶೆಟ್ಟಿ, ರಾಘವೇಂದ್ರ, ಬಸವರಾಜ ಕುಮಾರ ಇದ್ದರು. 
ರಾಯಚೂರು

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ಅಗತ್ಯ

ಮಾನ್ವಿ: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದಾಗ ಸಮಾಜ ಮತ್ತು ಸಂಘ ಸಂಸ್ಥೆಗಳು ಪ್ರೋತ್ಸಾಹ ನೀಡಿ ಅವರಲ್ಲಿ ಮತ್ತಷ್ಟು ಓದಿನ ಕಡೆ ಆಸಕ್ತಿ ಮೂಡುತ್ತದೆ ಎಂದು ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು. 
ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಗರೇಶ್ವರ ಆರ್ಯವೈಶ್ಯ ಸಂಘ ಹಮ್ಮಿಕೊಂಡಿದ್ದ ವಾಸವಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ನಗರೇಶ್ವರ ಸಂಘದಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುತ್ತಿರುವುದು ಶ್ಲಾಘನೀಯ. ಪಾಲಕರು ಮಕ್ಕಳ ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಲು ಪಾಲಕರು ತಿಳಿಹೇಳಬೇಕು. ಶಿಕ್ಷಣದಿಂದ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಇಲ್ಲದಿದ್ದರೆ ಏನೂ ಸಾಧನೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು. 
ಆರ್ಯವೈಶ್ಯ ಸಂಘದ ತಾಲೂಕು ಅಧ್ಯಕ್ಷ ಆರ್.ಮುತ್ತುರಾಜ್ ಶೆಟ್ಟಿ ಮಾತನಾಡಿ, ಆರ್ಯವೈಶ್ಯ ಸಮಾಜ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಗೌರವಿಸುತ್ತಿದೆ. ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಂಘದ ಆರ್.ದ್ವಾರಕನಾಥ ಶೆಟ್ಟಿ, ಡಿ. ರಾಘವೇಂದ್ರ ಶೆಟ್ಟಿ, ಆರ್.ಪುರುಷೋತ್ತಮ ಶೆಟ್ಟಿ, ರಾಘವೇಂದ್ರ, ಬಸವರಾಜ ಕುಮಾರ, ಮಂಚಾಲಿ ಶೋಭಾ, ಜಿ.ಲಕ್ಷ್ಮೀ, ಬಿ.ವೇದಾ ಇತರರಿದ್ದರು.