ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಸಂಘಟನೆ ನೇತೃತ್ವದಲ್ಲಿ ಶುಕ್ರವಾರ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು. ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಪ್ರಮುಖರಾದ ರಮೇಶ್, ವೀರೇಶ್, ರಫಿ, ಡಿ.ಎಸ್. ಶರಣಬಸವ, ಕೆ.ಜಿ. ವಿರೇಶ್, ಕರಿಯಪ್ಪ ಅಟ್ಟೋಳಿ, ರಾಘವೇಂದ್ರ, ರಾಜು, ಮೇಶಕ್, ಗುರುರಾಜ್ ಇದ್ದರು. 
ರಾಯಚೂರು

ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಸಂಘಟನೆ ನೇತೃತ್ವದಲ್ಲಿ ಶುಕ್ರವಾರ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಧಾನಮಂತ್ರಿ ದೇಶದ ವಿದ್ಯಾರ್ಥಿ ಹಾಗೂ ಯುವಜನರ ಕ್ಷಮೆ ಯಾಚಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ವಿದ್ಯಾರ್ಥಿಯ ಸಾವಿನ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ 1 ಕೋಟಿ ರೂ.ಪರಿಹಾರ ನೀಡಬೇಕು. ಎನ್ ಟಿಎ ರದ್ದುಗೊಳಿಸಿ, ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಕೈಬಿಡಬೇಕು. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮ ಎಸಗಿದವರಿಗೆ ಕನಿಷ್ಠ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯವರೆಗೆ ಕಠಿಣಗೊಳಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಪ್ರಮುಖರಾದ ರಮೇಶ್, ವೀರೇಶ್, ರಫಿ, ಡಿ.ಎಸ್. ಶರಣಬಸವ, ಕೆ.ಜಿ. ವಿರೇಶ್, ಕರಿಯಪ್ಪ ಅಟ್ಟೋಳಿ, ರಾಘವೇಂದ್ರ, ರಾಜು, ಮೇಶಕ್, ಗುರುರಾಜ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.