ಸಿಂಧನೂರಿನಲ್ಲಿ ತಹಸಿಲ್ ಕಚೇರಿ ಶಿರಸ್ತೇದಾರ್ ವೀಣಾಗೆ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವರು. 
ರಾಯಚೂರು

ನೀಟ್ ಅಕ್ರಮ ವಿರುದ್ಧ ಕ್ರಮಕೈಗೊಳ್ಳಿ

ನರೇಶ್ ಕುಮಾರ್
ಸಿಂಧನೂರು: ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಸಾಲಿಡಾರಿಟಿ ಯೂತ್ ಮೂಮೆಂಟ್, ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಹಾಗೂ ಜಮಾಅತೆ ಇಸ್ಲಾಮಿ ಹಿಂದ್‌ನಿಂದ ಬುಧವಾರ ಪ್ರತಿಭಟನೆ ನಡೆಯಿತು.
ಕೇಂದ್ರ ಸರ್ಕಾರ ಸಂವಿಧಾನಬದ್ಧ ಮತ್ತು ನೈತಿಕ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗುವಂಥ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಸ್ಪಂದಿಸಿ ನ್ಯಾಯ ಒದಗಿಸಬೇಕು. 
ದೆಹಲಿಯ ಜಂತರ್-ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡನೀಯ. ಲಡಾಖ್‌ನ ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ ಬೇಡಿಕೆಗಳ ಕುರಿತು ತೋರುವುದು ಸರಿಯಲ್ಲ ಎಂದರು. 
ಕೇಂದ್ರ ಸರ್ಕಾರವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ನೀಟ್ ಅಕ್ರಮಗಳಿಂದ ದೇಶದ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು. ಅಕ್ರಮಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು. 
ಜಮಾಅತೆ ಇಸ್ಲಾಮಿ ಹಿಂದ್ ತಾಲೂಕು ಅಧ್ಯಕ್ಷ ಹುಸೇನ್‌ಸಾಬ್, ಮನುಜಮತ ಬಳಗದ ಬಸವರಾಜ ಬಾದರ್ಲಿ, ಘಟಕ ಅಧ್ಯಕ್ಷೆ ನೇಹಾ ಸಮರೀನ್, ಸಾಲಿಡಾರಿಟಿ ಯೂತ್ ಮೂಮೆಂಟ್ ತಾಲೂಕು ಅಧ್ಯಕ್ಷ ಅಬುಲೈಸ್ ನಾಯ್ಕ, ಅಫ್ಜಲ್ ಹುಸೈನ್, ಹುಸೇನ್‌ಸಾಬ್, ಮಹಿಳಾ ಘಟಕ ಅಧ್ಯಕ್ಷೆ ಸುಮಯ್ಯ ಪರ್ವೀನ್, ಮನುಜಮತ ಬಳಗದ ಬಸವರಾಜ ಬಾದರ್ಲಿ, ಚಾಂದ್ ಜಾಗೀರದಾರ್, ಚಾಂದಪಾಷಾ, ಶಫೀಲ್ಲಾ ಖಾನ್, ಸೊಹೈಲ್ ದೇಸಾಯಿ, ಖಾಜಿ ಜಾವೇದ್, ಇಸ್ಮಾಯಿಲ್, ನಯಿಮ್ ಇರ್ಫಾನ್, ಡಾ. ವಾಸಿಂ, ತನ್ವೀರ್ ಇದ್ದರು.