ಸಿಂಧನೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. 
ರಾಯಚೂರು

ಸೋನಿಯಾ-ರಾಹುಲ್ ವಿರುದ್ಧ ಕ್ರಮಕೈಗೊಳ್ಳಿ

ಅಶೋಕ್ ಕುಮಾರ್ ಎನ್

ಸಿಂಧನೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವಂದೇ ಮಾತರಂ ಗೀತೆಗೆ ಅಗೌರವ ತೋರಿರುವ ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ, ರಾಹುಲ್‌ಗಾಂಧಿ ವರ್ತನೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಪ್ರವಾಸಿ ಮಂದಿರದಿಂದ ತಹಸಿಲ್ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ವಂದೇ ಮಾತರಂ ಗೀತೆಗೆ ಅಗೌರವ ತೋರಿರುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಯುವ ಮೋರ್ಚಾ ಮಂಡಲ ಅಧ್ಯಕ್ಷ ಮುತ್ತು ಬರ್ಸಿ, ಗ್ರಾಮೀಣ ಘಟಕ ಅಧ್ಯಕ್ಷ ವಂಶಿಕೃಷ್ಣ, ಒಬಿಸಿ ಗ್ರಾಮೀಣ ಘಟಕದ ಅಧ್ಯಕ್ಷ ಸೋಮನಾಥ ಕಲ್ಲೂರು, ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷ ಬಾಲರಾಜ್, ಎಸ್ಟಿ ಮೋರ್ಚಾ ಮಂಡಲ ಅಧ್ಯಕ್ಷ ಬಸವರಾಜ ನಾಯಕ, ಗ್ರಾಮೀಣ ಮಂಡಲ ಅಧ್ಯಕ್ಷ ಹುಲುಗಪ್ಪ, ಹೇಮನಗೌಡ ಇತರರಿದ್ದರು.