ಸಿಂಧನೂರಿನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿಯಿಂದ ತಹಸೀಲ್ದಾರ್ ಅರುಣ್ ದೇಸಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘಟನೆ ಅಧ್ಯಕ್ಷ ದುರುಗೇಶ ಕಲಮಂಗಿ, ನರಸಪ್ಪ ಬಡಿಗೇರ, ಶಿವಪುತ್ರ ಅಮರಾಪುರ, ದೇವರಾಜ, ರಾಜು ಹುಲಗುಂಚಿ ಇತರರಿದ್ದರು. 
ರಾಯಚೂರು

ಭಿಕ್ಷಾಟನೆ ನಿಷೇಧಕ್ಕೆ ಕ್ರಮವಹಿಸಿ

ರುದ್ರಪ್ಪ ವಾಲಿ

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿ
  • ಪರಿಷತ್
  • ತಾಲೂಕು
ಸಿಂಧನೂರು: ನಗರ ಸೇರಿ ತಾಲೂಕಿನಲ್ಲಿ ಮಕ್ಕಳು, ವೃದ್ಧರು, ಮಹಿಳೆಯರು ಸಾರ್ವಜನಿಕ ಸ್ಥಳದಲ್ಲಿ ಭಿಕ್ಷೆ ಬೇಡುವುದನ್ನು ತಡೆಯುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿಯಿಂದ ಸೋಮವಾರ ತಹಸೀಲ್ದಾರ್ ಅರುಣ್ ದೇಸಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕರ್ನಾಟಕ ಭಿಕ್ಷಾಟನೆ ಅಧಿನಿಯಮ 1975ರನ್ವಯ ರಾಜ್ಯದಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಭಿಕ್ಷೆ ಬೇಡುವುದು ಕಾನೂನು ಬಾಹಿರವಾಗಿದ್ದು, ನಗರದಲ್ಲಿ ಅದಕ್ಕೆ ಕಡಿವಾಣ ಬಿದ್ದಿಲ್ಲ.
ಬಸ್‌ನಿಲ್ದಾಣದಲ್ಲಿ ಭಿಕ್ಷುಕರ ಸಂಖ್ಯೆ ಹೆಚ್ಚಿದೆ. ಬೇರೊಂದು ಪಟ್ಟಣದಿಂದ ದಿನವೂ ಬರುವ ಜನ ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ತಾಲೂಕು ಆಡಳಿತ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.