ರಾಯಚೂರು
ವಾಲ್ಮೀಕಿ ನಾಯಕ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅಗಸ್ಟ್ 09 ರಂದು ಹಮ್ಮಿಕೊಳ್ಳಲಾಗಿದೆಂದು ಅಖಿಲಾಂಡ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಕಲ್ಯಾಣ ಕರ್ನಾಟಕ ಸಮಿತಿ ಅಧ್ಯಕ್ಷ ವೆಂಕಟೇಶ ನಾಯಕ ಅಸ್ಕಿಹಾಳ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2025-26 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90 ಹೆಚ್ಚು ಅಂಕ ಪಡೆದ ಸಮಾಜ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುತ್ತದೆ. ಕೂಡಲೇ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಎರಡು ಭಾವಚಿತ್ರದೊಂದಿಗೆ ಅರ್ಜಿಯನ್ನು ಜು.30 ರೊಳಗೆ ಆಯಾ ತಾಲೂಕಗಳಲ್ಲಿ ಮಾಡಿ ಕೊಳ್ಳಬೇಕು ಎಂದರು.
ಅಗಸ್ಟ್ 09 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ನಂತರ ಸಂಜೆ ಸಮಾಜದ ಮುಖಂಡ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ.7 ರಷ್ಟು ಮೀಸಲಾತಿ ನಿಗದಿ ಮಾಡಲು 9 ಶೆಡ್ಯೂಲ್‌ಗೆ ಸೇರ್ಪಡೆ ವಿಷಯವಾಗಿ ವಿಚಾರ ಸಂಕಿರಣ ನಡೆಯಲಿದೆ. ಸಮಾಜ ವಿವಿಧ ಸಂಘಟನೆಗಳು, ವಿದ್ಯಾರ್ಥಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ರಾಘವೇಂದ್ರ ನಾಯಕ ವಕೀಲ, ವೆಂಕಟೇಶ ದಿನ್ನಿ, ನಾಗೇಶ ನಾಯಕ, ನರಸರೆಡ್ಡಿ ಇದ್ದರು.