ತುರ್ವಿಹಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಉದ್ಘಾಟಿಸಿದರು. ದೈಹಿಕ ಶಿಕ್ಷಣಾಧಿಕಾರಿ ಸೋಮಲಿಂಗಪ್ಪ ಉಳ್ಳಾಗಡ್ಡಿ, ಪಪಂ ಅಧ್ಯಕ್ಷ ಬಾಪುಗೌಡ ದೇವರಮನಿ, ಎಸ್ಡಿಎಂಸಿ ಅಧ್ಯಕ್ಷ ಶಿವಪುತ್ರಪ್ಪ ಕೆಂಗೇರಿ ಇತರರಿದ್ದರು. 
ರಾಯಚೂರು

ಮಕ್ಕಳಿಗೆ ಜೀವನ ಮೌಲ್ಯಗಳ ಕಲಿಸಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಆರ್.ಬಸನಗೌಡ ಹೇಳಿಕೆ
  • ತುರ್ವಿಹಾಳದಲ್ಲಿ ಪ್ರತಿಭಾ ಕಾರಂಜಿ
ಸಿಂಧನೂರು: ಗ್ರಾಮೀಣ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು. 
ತುರ್ವಿಹಾಳ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಣದಲ್ಲಿ ಅಂಕಗಳ ಜತೆಗೆ ಜೀವನ ಮೌಲ್ಯಗಳು, ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಬೇಕು. ಇದರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಮಕ್ಕಳ ಪ್ರತಿಭೆಗೆೆಗೆ ಶಿಕ್ಷಕರು, ಪಾಲಕರು ಪ್ರೋತ್ಸಾಹ ನೀಡಬೇಕು ಎಂದರು. 
ದೈಹಿಕ ಶಿಕ್ಷಣಾಧಿಕಾರಿ ಸೋಮಲಿಂಗಪ್ಪ ಉಳ್ಳಾಗಡ್ಡಿ ಮಾತನಾಡಿ, ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಕಲೆಗಳಲ್ಲಿಯೂ ಆಸಕ್ತಿ ಇದ್ದು, ಪಾಲಕರು, ಶಿಕ್ಷಕರು ಸೂಕ್ಷ್ಮವಾಗಿ ಗಮನಿಸಿ ಅಗತ್ಯ ಪ್ರೋತ್ಸಾಹ ನೀಡಿದರೆ ಗುರಿ ಮುಟ್ಟಲು ಸಾಧ್ಯವಾಗುವುದು ಎಂದರು. 
ಪಪಂ ಅಧ್ಯಕ್ಷ ಬಾಪುಗೌಡ ದೇವರಮನಿ ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳ ಕಲಾಸಕ್ತಿಯನ್ನು ಹೆಚ್ಚಿಸುತ್ತದೆ  ಎಂದರು. ಎಸ್ಡಿಎಂಸಿ ಅಧ್ಯಕ್ಷ ಶಿವಪುತ್ರಪ್ಪ ಕೆಂಗೇರಿ ಅಧ್ಯಕ್ಷತೆ ವಹಿಸಿದ್ದರು. ಇಸಿಒ ಸಾವನ್‌ಸಾಬ್, ಸಿಆರ್‌ಪಿ ಹನುಮಂತ ಭಂಗಿ, ಮುಖ್ಯಶಿಕ್ಷಕ ಜಗದೀಶ್ ನಾಯಕ, ಪಪಂ ಮಾಜಿ ಅಧ್ಯಕ್ಷ ಶಾಮೀದ ಸಾಬ್ ಚೌದ್ರಿ, ಪಪಂ ಉಪಾಧ್ಯಕ್ಷೆ ಲಕ್ಷ್ಮೀ ಸೋಮನಾಥ ಮಾಟೂರ, ಪಪಂ ಮಾಜಿ ಸದಸ್ಯ ಅಬುತುರಾಬ್ ಖಾಜಿ, ಎಸ್ಡಿಎಂಸಿ ಸದಸ್ಯ ನಾಗಲಿಂಗಪ್ಪ, ಹನುಮೇಶ, ಮರಿಯಪ್ಪ ಪೂಜಾರಿ ಇದ್ದರು.