ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಸಂಜೆ ಪರಿಮಳ ತೀರ್ಥದಲ್ಲಿ ಪ್ರಹ್ಲಾದರಾಜರ ಉತ್ಸವ ಮೂರ್ತ್ಗಿ ತೆಪ್ಪೋತ್ಸವವು ವಿಜೃಂಭಣೆಯಿಂದ ಜರುಗಿತು.
- ಪ್ರಹ್ಲಾದರಾಜರ ಉತ್ಸವ ಮೂರ್ತಿಭವ್ಯ ಮೆರವಣಿಗೆ
- ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಪ್ರಹ್ಲಾದರಾಜರ ಉತ್ಸವ ಮೂರ್ತಿಗೆ ವಿಶೇಷಪೂಜೆ
ರಾಯಚೂರು: ಕಾರ್ತೀಕ ಮಾಸದ ನಿಮಿತ್ತ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಸಂಜೆ ಪರಿಮಳ ತೀರ್ಥದಲ್ಲಿ ತೆಪ್ಪೋತ್ಸವವು ವಿಜೃಂಭಣೆಯಿಂದ ಜರುಗಿತು.
ಶ್ರೀಮಠದಿಂದ ಪ್ರಹ್ಲಾದರಾಜರ ಉತ್ಸವ ಮೂರ್ತಿಯನ್ನು ಭಕ್ತರ ಜಯಘೋಷದ ಮಧ್ಯೆ ಭವ್ಯ ಮೆರವಣಿಗೆಯಲ್ಲಿ ಪರಿಮಳ ತೀರ್ಥದವರೆಗೆ ಕರೆತರಲಾಯಿತು. ನಂತರ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಪ್ರಹ್ಲಾದರಾಜರ ಉತ್ಸವ ಮೂರ್ತಿಗೆ ವಿಶೇಷಪೂಜೆ ನೆರವೇರಿಸಿದರು.
ಬಳಿಕ ಪುಷ್ಕರಣಿಯಲ್ಲಿ ಅಲಂಕೃತಗೊಂಡ ತೆಪ್ಪದಲ್ಲಿ ಪ್ರಹ್ಲಾದರಾಜರ ಮೂರ್ತಿಯನ್ನಿರಿಸಿ ತೆಪ್ಪೋತ್ಸವ ನೆರವೇರಿಸಲಾಯಿತು. ಈ ವೇಳೆ ನೆರೆದಿದ್ದ ಸಹಸ್ರಾರು ಭಕ್ತರು ತೆಪ್ಪೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಂಡರು.