ದೇಸಾಯಿ ಭೋಗಾಪುರದ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಹೊಸ 4 ಕೊಠಡಿಗಳನ್ನು ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಅವರು ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಬಿಇಒ ಸುಜಾತಾ ಹೂನೂರು, ಸಿಆರ್‌ಪಿ ಶರಣಪ್ಪ ಮಾದರ್ ಇತರರಿದ್ದರು. 
ರಾಯಚೂರು

ಮಕ್ಕಳ ಭವಿಷ್ಯ ರೂಪಿಸಲು ಪ್ರಯತ್ನಿಸಿ

ಮುದಗಲ್: ಮಸ್ಕಿ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಅತಿಹೆಚ್ಚು ಅನುದಾನ ನೀಡಲಾಗಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಸಮೀಪದ ತಲೇಖಾನ್ ಗ್ರಾಪಂ ವ್ಯಾಪ್ತಿಯ ದೇಸಾಯಿ ಭೋಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ 53 ಲಕ್ಷ ರೂ. ವೆಚ್ಚದ ನಾಲ್ಕು ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಕ್ಯಾಸೋಟೆಕ್ ಸಂಸ್ಥೆ ಉತ್ತಮ ರೀತಿಯಲ್ಲಿ ಕಟ್ಟಡ ನಿರ್ಮಿಸಿದೆ. ಪಾಲಕರು ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಿ, ಅವರ ಭವಿಷ್ಯ ನಿರ್ಮಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು. ಸರ್ಕಾರ ಕೆಕೆಆರ್‌ಡಿಬಿಗೆ 5 ಸಾವಿರ ಕೋಟಿ ರೂ. ಅನುದಾನ ನೀಡಿದೆ. ಶಾಲಾ ಕಟ್ಟಡ, ಕಾಂಪೌಂಡ್, ಆಟದ ಮೈದಾನ, ಗ್ರಂಥಾಲಯ ಕಟ್ಟಡ ಸೇರಿದಂತೆ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಅನುದಾನ ಮೀಸಲಿರಿಸಲಾಗಿದೆ ಎಂದರು.
ತಾಪಂ ಕೆಡಿಪಿ ಸದಸ್ಯ ದೇವಪ್ಪ ರಾಠೋಡ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮೆಹಬೂಬ್‌ಸಾಬ್ ಮುದ್ದಾಪುರ, ಪ್ರಮುಖರಾದ ಹನುಮಂತಪ್ಪ ಮುದ್ದಾಪುರ, ಭೀಮಣ್ಣ, ಹುಲಗಪ್ಪ, ಗ್ರಾಪಂ ಸದಸ್ಯರಾದ ವೀರನಗೌಡ ಪಾಟೀಲ್, ಹನುಮಂತಪ್ಪ ಗಂಟಿ, ಕನಕಪ್ಪ ಗುಡಿಹಾಳ, ಯಮನೂರ, ಭೂದಾನಿ ಶರಣಗೌಡ ಇತರರಿದ್ದರು.