ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ರಾಯಚೂರಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ತಾಯಿಯ ಹೆಸರಿನಲ್ಲಿ ಒಂದು ಮರ ಕಾರ್ಯಕ್ರಮದಡಿ ರಾಯಚೂರು ಭಾರತ ವನ ಯೋಜನೆಗೆ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರೀನ್ ಹೀರೊ ಆಫ್ ಇಂಡಿಯಾ ಎಂದೇ ಕರೆಯಲ್ಪಡುವ ಡಾ. ರಾಧಾಕೃಷ್ಣನ್ ನಾಯರ್, ಹಣಕಾಸು ಸಚಿವಾಲಯದ ಕಾರ್ಯದರ್ಶಿ ಸಂಜಯ್ ಲೋಹಿಯಾ, ಆಪ್ತ ಕಾರ್ಯದರ್ಶಿ ಅನಿರುದ್ಧ ಶ್ರವಣ್, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಶಾಜಿ ಕೃಷ್ಣನ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಡಿಸಿ ಪೂವಿತಾ ಎಸ್., ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ಎಸ್ಪಿ ಅರುಣಾಂಗ್ಷು ಗಿರಿ, ಎಸಿ ಡಾ.ಹಂಪಣ್ಣ ಸಜ್ಜನ್ ಇದ್ದರು.
- ವಿದ್ಯಾರ್ಥಿಗಳೊಂದಿಗೆ ಸಸಿನೆಟ್ಟು ಸಂವಾರ
- ವಿದ್ಯಾರ್ಥಿಗಳ ಜತೆಗೂಡಿ ಸಚಿವರು ಸಸಿಗಳನ್ನು ನೆಟ್ಟು, ಸಂವಾದ ನಡೆಸಿದರು.
- ತಾಯಿಯ ಹೆಸರಿನಲ್ಲಿ ಒಂದು ಮರ
ರಾಯಚೂರು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ತಾಯಿಯ ಹೆಸರಿನಲ್ಲಿ ಒಂದು ಮರ ಕಾರ್ಯಕ್ರಮದಡಿ ರಾಯಚೂರು ಭಾರತ ವನ ಯೋಜನೆಗೆ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ
ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾಡಳಿತ, ಎಸ್‌ಪಿಎಂಸಿಐಎಲ್ ಸಂಸ್ಥೆಯ ಸಾಮಾಜಿಕ ಕಳಕಳಿಯ ಸಹಯೋಗದೊಂದಿಗೆ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು, ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು. ವಿದ್ಯಾರ್ಥಿಗಳ ಜತೆಗೂಡಿ ಸಚಿವರು ಸಸಿಗಳನ್ನು ನೆಟ್ಟು, ಸಂವಾದ ನಡೆಸಿದರು. ಭಾರತ ವನ ಯೋಜನೆಯಡಿ ಒಟ್ಟು 60,000 ಸ್ಥಳೀಯ ಜಾತಿಯ ಸಸಿಗಳನ್ನು ನೆಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 10,000 ಸಸಿಗಳು ಹಾಗೂ ರಾಯಚೂರು ಮಹಾನಗರ ಪಾಲಿಕೆಯ ಘನ ತ್ಯಾಜ್ಯ ನಿರ್ವಹಣಾ ಘಟಕ ಪ್ರದೇಶದಲ್ಲಿ 50,000 ಸಸಿಗಳನ್ನು ನೆಡಲಾಗುತ್ತದೆ ಎಂದರು.
ಪ್ರತಿಯೊಬ್ಬರು ತಾಯಿಯ ಹೆಸರಿನಲ್ಲಿ ಸಸಿಗಳನ್ನು ನೆಟ್ಟು ರಾಯಚೂರನ್ನು ಮಲೆನಾಡು ಮಾಡುವ ಗುರಿ ಹೊಂದಬೇಕು ಎಂದರು.
ನಂತರ ಪೌರಕಾರ್ಮಿಕರ ಜತೆಗೆ ತೆಲುಗಿನಲ್ಲಿ ಮಾತನಾಡಿ, ಪೌರ ಕಾರ್ಮಿಕ ಕಾಯಕ ಅಷ್ಟು ಸುಲಭವಾದ ಕೆಲಸವಲ್ಲ. ಬೆಳಗ್ಗೆಯಿಂದ ರಾತ್ರಿವರೆಗೆ ನಗರ ಸ್ವಚ್ಚತೆಗೆ ಹಗಲಿರಳು ಶ್ರಮವಹಿಸುತ್ತಿದ್ದಿರಿ. ಇದರ ಜತೆಗೆ ಪ್ರತಿಒಬ್ಬರ ಒಂದು ಗಿಡವನ್ನು ಬೆಳಸಿ ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಪೂವಿತಾ ಎಸ್. ಮಾತನಾಡಿ, ಜಿಲ್ಲೆಯಲ್ಲಿ ಭಾರತ ವನ ಯೋಜನೆಯಡಿ ಒಟ್ಟು 60,000 ಸ್ಥಳೀಯ ಜಾತಿಯ ಸಸಿಗಳನ್ನು ನೆಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 10,000 ಸಸಿಗಳು ಹಾಗೂ ಮಹಾನಗರ ಪಾಲಿಕೆಯ ಘನ ತ್ಯಾಜ್ಯ ನಿರ್ವಹಣಾ ಘಟಕ ಪ್ರದೇಶದಲ್ಲಿ 50,000 ಸಸಿಗಳನ್ನು ನೆಡಲಾಗುತ್ತದೆ ಎಂದರು.
ಪರಿಸರ ಸಮತೋಲನವನ್ನು ಕಾಪಾಡಲು ಒಟ್ಟು ಭೌಗೋಳಿಕ ವಿಸ್ತೀರ್ಣದ ಕನಿಷ್ಠ 30 ಶೇಕಡಾ ಭಾಗ ಅರಣ್ಯಾವರಣ ಹೊಂದಿರಬೇಕೆಂಬ ರಾಷ್ಟ್ರೀಯ ಗುರಿ ಇದ್ದರೂ, ಜಿಲ್ಲೆಯ ಅರಣ್ಯಾವರಣವು 2 ಶೇಕಡಾಕ್ಕಿಂತಲೂ ಕಡಿಮೆ ಇದೆ. ಇದರ ಪರಿಣಾಮವಾಗಿ ಭೂಮಿಯ ಉಷ್ಣತೆ ಹೆಚ್ಚಳ, ಮಣ್ಣಿನ ಫಲವತ್ತತೆ ಕುಸಿತ, ಭೂಗರ್ಭ ಜಲಮಟ್ಟ ಇಳಿಕೆ, ಜೀವ ವೈವಿಧ್ಯತೆಯ ನಷ್ಟ ಹಾಗೂ ಹವಾಮಾನ ವೈಪರೀತ್ಯಗಳಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತ ವನ ಯೋಜನೆ ರಾಯಚೂರು ಜಿಲ್ಲೆಯ ಪರಿಸರ ಭವಿಷ್ಯಕ್ಕೆ ಹೊಸ ಆಶಾಕಿರಣವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಗ್ರೀನ್ ಹೀರೊ ಆಫ್ ಇಂಡಿಯಾ ಎಂದೇ ಕರೆಯಲ್ಪಡುವ ಡಾ. ರಾಧಾಕೃಷ್ಣನ್ ನಾಯರ್, ಹಣಕಾಸು ಸಚಿವಾಲಯದ ಕಾರ್ಯದರ್ಶಿ ಸಂಜಯ್ ಲೋಹಿಯಾ, ಆಪ್ತ ಕಾರ್ಯದರ್ಶಿ ಅನಿರುದ್ಧ ಶ್ರವಣ್, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಶಾಜಿ ಕೃಷ್ಣನ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ಎಸ್ಪಿ ಅರುಣಾಂಗ್ಷು ಗಿರಿ, ಎಸಿ ಡಾ.ಹಂಪಣ್ಣ ಸಜ್ಜನ್ ಸೇರಿ ಅನೇಕರು ಇದ್ದರು.