ಅರಕೇರಾ ತಾಲೂಕಿನ ಗಲಗ ಗ್ರಾಮದಲ್ಲಿ ಸಿಡಿಪಿಒ ಮಹೇಶ ನಾಯಕ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು. ವಲಯ ಮೇಲ್ವಿಚಾರಕಿ ಮಾನಮ್ಮ, ಅಂಗನವಾಡಿ ಕಾರ್ಯಕರ್ತೆ ರೇಣುಕಾ ಇತರರಿದ್ದರು.
ಅರಕೇರಾ: ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಶಿಕ್ಷಣ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಿಡಿಪಿಒ ಮಹೇಶ ನಾಯಕ ಹೇಳಿದರು. ತಾಲೂಕಿನ ಗಲಗ ಗ್ರಾಮದ 4ನೇ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಶುಕ್ರವಾರ ಮಾತನಾಡಿದರು.
ಪ್ರತಿ ತಿಂಗಳು ಬಾಲ ವಿಕಾಸ ಸಲಹಾ ಸಮಿತಿ ಸಭೆ ನಡೆಸಬೇಕು. ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯ ತಪಾಸಣೆಯನ್ನು ವೈದ್ಯರ ಸಲಹೆಯಂತೆ ನಿಯಮಿತವಾಗಿ ಮಾಡಿಸಬೇಕು.
ಲಾನುಭವಿಗಳ ಮನೆ ಮನೆಗೆ ಭೇಟಿ ನೀಡಿ ಅಂಗನವಾಡಿ ಕೇಂದ್ರಗಳ ಮೂಲಕ 6ತಿಂಗಳಿಂದ 3ವರ್ಷದ ಮಕ್ಕಳಿಗೆ, ಗರ್ಭಿಣಿ ಹಾಗೂ ಬಾಣಂತಿಯರಿಗೆ ಮನೆಗೆ ನೀಡುವ ಪೌಷ್ಟಿಕ ಆಹಾರಗಳಾದ ಮೊಟ್ಟೆ, ಲಾಡು, ಅಕ್ಕಿ, ಗೋಧಿ, ಹೆಸರು ಕಾಳು, ಮಸಾಲೆ ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ಸರಿಯಾಗಿ ವಿತರಿಸಲಾಗುತ್ತಿದೆಯೇ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದರು.