ಯಲಗಟ್ಟಾ ಗ್ರಾಮದ ವಿದ್ಯಾರ್ಥಿಗಳು ನಡೆದುಕೊಂಡು ಶಾಲೆಗೆ ಹೋಗುತ್ತಿರುವುದು.
ಹಟ್ಟಿಚಿನ್ನದಗಣಿ: ರೋಡಲಬಂಡಾ ಹಾಗೂ ಯಲಗಟ್ಟಾ ಗ್ರಾಮದ ವಿದ್ಯಾರ್ಥಿಗಳು ಪಟ್ಟಣದ ಶಾಲೆ, ಕಾಲೇಜಿಗೆ ಆಗಮಿಸುತ್ತಾರೆ. ಕಳೆದ ಒಂದು ವಾರದಿಂದ ನಿಗದಿತ ಸಮಯಕ್ಕೆ ಸರ್ಕಾರಿ ಬಸ್‌ಗಳು ಸಂಚರಿಸದ ಕಾರಣ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಳಗ್ಗೆ ಬಸ್‌ಗಳು ಬಾರದ ಕಾರಣ ವಿದ್ಯಾರ್ಥಿಗಳು ಸುಮಾರು ನಾಲ್ಕು ಕಿಲೋಮೀಟರ್ ದೂರದ ರೋಡಲಬಂಡಾ ಕ್ರಾಸ್‌ವರೆಗೆ ನಡೆದುಕೊಂಡು ಬಂದು, ಅಲ್ಲಿಂದ ಸಿಗುವ ಬಸ್ ಅಥವಾ ಖಾಸಗಿ ವಾಹನದ ಮೂಲಕ ಪಟ್ಟಣಕ್ಕೆ ಬರುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ತಡವಾಗಿ ತಲುಪುತ್ತಿದ್ದು, ಪಾಠ ಕೇಳುವುದರಿಂದ ವಂಚಿತರಾಗುತ್ತಿದ್ದಾರೆ.
ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ವಿದ್ಯಾರ್ಥಿಗಳು ಶಾಲೆ, ಕಾಲೇಜಿನಿಂದ ದೂರವುಳಿಯುವ ಸಾಧ್ಯತೆಗಳಿವೆ ಎಂಬುದು ಗ್ರಾಮಸ್ಥರ ಕಳವಳವಾಗಿದೆ. ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಬಸ್‌ಗಳ ಸಮರ್ಪಕ ಸಂಚಾರಕ್ಕೆ ಕ್ರಮವಹಿಸಬೇಕಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕಿದೆ.