ತಾಲೂಕಿನ ರಾಜಲಬಂಡಾ ಗ್ರಾಮದ ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ಕಂದಕ, ಬದು ನಿರ್ಮಾಣ ಕಾಮಗಾರಿಯನ್ನು ಜಿಪಂ ಸಿಇಓ ಈಶ್ವರ ಕುಮಾರ ಕಾಂದೋ ಭೇಟಿ ನೀಡಿ, ಪರಿಶೀಲಿಸಿದರು. ತಾಪಂ ಇಓ ಚಂದ್ರಶೇಖರ ಪವಾರ, ನಿರ್ಮಿತ ಕೇಂದ್ರದ ಎಇ ಮೋಹನ, ಸಹಾಯಕ ನಿರ್ದೇಶಕ ಹನುಮಂತ ಇದ್ದರು. 
ರಾಯಚೂರು

ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ದಿಢೀರ್ ಭೇಟಿ

ರಾಯಚೂರು ತಾಲೂಕಿನ ರಾಜಲಬಂಡಾ ಗ್ರಾಮದ ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರ ಆರೋಗ್ಯದ ಹಿತದೃಷ್ಠಿ ಹಾಗೂ ಬಿಸಿಲಿನ ತಾಪಮಾಣದಿಂದ ರಕ್ಷಣೆ ಮಾಡಿಕೊಳ್ಳಲು ಕುಡಿಯುವ ನೀರು, ನೆರಳು ಹಾಗೂ ಪ್ರಥಮ ಚಿಕಿತ್ಸೆ ವ್ಯವಸ್ಥೆಯನ್ನು ಪಂಚಾಯತಿಯಿಂದ ಕಡ್ಡಾಯವಾಗಿ ಕಲ್ಪಿಸಬೇಕೆಂದು ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ ಸೂಚಿಸಿದರು.
ತಾಲೂಕಿನ ಮಿಟ್ಟಿಮಲ್ಕಾಪುರ ಗ್ರಾಮಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು. ನರೇಗಾದಡಿ ಕೆಲಸ ಮಾಡುವ ಕೂಲಿಕಾರರಿಗೆ ಅಗತ್ಯ ಕುಡಿಯುವ ನೀರು ಸೇರಿದಂತೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.
ನಂತರ ಬಿಜನಾಗೇರಾ ಗ್ರಾಮದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ವೀಕ್ಷಣೆ ಗ್ರಾ.ಪಂ ಕಛೇರಿಗೆ ತೆರಳಿ ಅಲ್ಲಿನ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಕಿಟನಿಂದ ನೀರಿನ ಪರೀಕ್ಷೆಗಳನ್ನು ನಿಯಮಿತವಾಗಿ ಮಾಡಲು ಹಾಗೂ ತೆರಿಗೆ ವಸೂಲಾತಿ, ಕೆಲಸದ ಬೇಡಿಕೆ ಮತ್ತು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ತಾಪಂ ಇಓ ಚಂದ್ರಶೇಖರ ಪವಾರ, ನಿರ್ಮಿತ ಕೇಂದ್ರದ ಎಇ ಮೋಹನ, ಸಹಾಯಕ ನಿರ್ದೇಶಕ ಹನುಮಂತ ಸೇರಿ ಅನೇಕರು ಇದ್ದರು.