ಜಿಲ್ಲೆ

ರೈಲು ಯೋಜನೆಗೆ ಚುರುಕು

kumarvrl

ಬೆಂಗಳೂರು: ಬೆಂಗಳೂರು ಸಬರ್ಬನ್ ರೈಲು ಯೋಜನೆಗೆ ಕೇಂದ್ರ ಸರ್ಕಾರದ ಅಂತಿಮ ಮಂಜೂರಾತಿಯನ್ನು ಶೀಘ್ರವಾಗಿ ಪಡೆದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕುಡಚಿ -ಬಾಗಲಕೋಟೆ ರೈಲ್ವೆ ಯೋಜನೆಯ ಅನುಷ್ಠಾನಕ್ಕೆ ಇರುವ ಅಡಚಣೆಗಳನ್ನು ಶೀಘ್ರ ಬಗೆಹರಿಸುವಂತೆ ತಿಳಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಕೃಷಿ, ಶಿಕ್ಷಣ, ಇಂಧನ, ಆರೋಗ್ಯ, ನೀರಾವರಿ, ಪ್ರವಾಸೋದ್ಯಮ, ಕ್ರೀಡೆ ಮತ್ತು ಯುವಜನ, ಕೈಗಾರಿಕೆ, ಸಾರಿಗೆ ಮತ್ತು ಸಾಗಣೆ, ವಸತಿ, ಗ್ರಾಮೀಣಾಭಿವೃದ್ಧಿ, ದೂರಸಂಪರ್ಕ ಸೇರಿದಂತೆ 14 ವಲಯಗಳಲ್ಲಿ ಮೂಲಸೌಲಭ್ಯ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ 500 ಕೋಟಿ ರೂ. ಮೌಲ್ಯದ ಪಿಪಿಪಿ ಯೋಜನೆಗಳನ್ನು ಅನುಮೋದನೆ ನೀಡಲಾಗಿದೆ ಎಂದರು.

14 ವಲಯಗಳಲ್ಲಿ ಸಾರ್ವಜನಿಕ- ಖಾಸಗಿ ಮಾದರಿಯಲ್ಲಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು. ವಿಮಾನ ನಿಲ್ದಾಣಗಳ ಅಭಿವೃದ್ಧಿ, ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಯೋಜನೆಗಳಲ್ಲಿ ಪ್ರಗತಿ ಸಾಧಿಸುವಂತೆ ನಿರ್ದೇಶನ ನೀಡಿದರು.