ಹಾಸನ: ರೈಲ್ವೆ ಇಲಾಖೆ ನಡೆಸುತ್ತಿರುವ ಕೆಲಸಗಳು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿವೆ ಎಂದು ಗವೇನಹಳ್ಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ರೈಲ್ವೆ ಬ್ರಿಡ್ಜ್‌ನಿಂದ ರಾಜಘಟ್ಟ, ಗವೇನಹಳ್ಳಿ ಮಾರ್ಗದಲ್ಲಿ ಖಾಸಗಿ ವಾಹನಗಳಿಗೆ ತೆರಳಲು ರೈಲ್ವೆ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ಸ್ಥಳೀಯರು ಇತ್ತೀಚೆಗೆ ರಸ್ತೆ ಸಂಚಾರ ತಡೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು.
ಈ ರಸ್ತೆಯಲ್ಲಿ ನಿತ್ಯ ನೂರಾರು ಜನರು ಓಡಾಡುತ್ತಾರೆ. ರೈಲ್ವೆ ಇಲಾಖೆ ರಸ್ತೆ ಮಧ್ಯೆ ಗುಂಡಿ ತೆಗೆದು ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶವ್ಯಕ್ತಪಡಿಸಿದರು.
ಗವೇನಹಳ್ಳಿ ನಿವಾಸಿ ಹರೀಶ್‌ಗೌಡ ಮಾತನಾಡಿ, ಈ ಭಾಗದಲ್ಲಿ ರೈಲ್ವೆ ಗೂಡ್ಸ್ ಶೆಡ್‌ಗಳಿದ್ದು, ಸ್ಥಳೀಯರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ. ಈಗ ರಸ್ತೆ ಸಂಚಾರಕ್ಕೂ ಅಡ್ಡಿಪಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಸದಸ್ಯ ರಕ್ಷಿತ್ ಮಾತನಾಡಿ, ರೈಲ್ವೆ ಇಲಾಖೆ ಸಾರ್ವಜನಿಕರಿಗೆ ನಿರಂತರ ತೊಂದರೆ ನೀಡುತ್ತಾ ಬರುತ್ತಿದ್ದಾರೆ. ಜಿಲ್ಲಾಡಳಿತ, ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಬೇಕೆಂದರು.