ಯಲ್ಲಾಪುರ: ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮಳೆ ಜೋರಾಗಿದ್ದು, ಗುರುವಾರವೂ ಮುಂದುವರಿದಿದೆ. ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ.
ಜೋರಾದ ಗಾಳಿಯ ಪರಿಣಾಮ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಮರವೊಂದು ಬಿದ್ದು ಕೆಲಕಾಲ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಹೆದ್ದಾರಿ ವಿಭಾಗ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮರ ತೆರವುಗೊಳಿಸಿದರು.
ಪಟ್ಟಣ ವ್ಯಾಪ್ತಿಯಲ್ಲಿ ವಿವಿಧೆಡೆ ಸ್ಥಳೀಯ ಆಡಳಿತ ಮಳೆಗಾಲದ ಪೂರ್ವ ಗಟಾರ ಸ್ವಚ್ಛತಾ ಕಾರ್ಯ ಮಾಡದೇ ಇರುವ ಕಾರಣ ಗಟಾರದ ನೀರು ರಸ್ತೆಯ ಮೇಲೆ ಹರಿದು ವಾಹನ ಸವಾರರು ಪರದಾಡುವಂತಾಯಿತು.