ಮೂಲ್ಕಿ: ತಾಲೂಕು ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಅಲ್ಪಸ್ವಲ್ಪ ಹಾನಿ ಸಂಭವಿಸಿದೆ. ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪಳದ ಮೈದು ಎಂಬುವವರ ಮನೆಯ ಮುಂದಿನ ಬೃಹತ್ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ಭಾರಿ ಗಾತ್ರದ ಬೇವಿನ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಎರಡು ಮನೆಗಳ ಆವರಣ ಗೋಡೆಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಪವಾಡ ಸದೃಶ ಪಾರಾಗಿದ್ದಾರೆ. ಸ್ಥಳಕ್ಕೆ ಮೂಲ್ಕಿ ತಾಲೂಕು ಉಪತಹಸೀಲ್ದಾರ್ ದಿಲೀಪ್ ರೋಡ್ಕರ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಉಳಿದಂತೆ ತಾಲೂಕು ವ್ಯಾಪ್ತಿಯ ಕಿನ್ನಿಗೋಳಿ, ಪಕ್ಷಿಕೆರೆ, ಕಟೀಲು, ಪಡುಪಣಂಬೂರು, ಅತಿಕಾರಿಬೆಟ್ಟು ಪರಿಸರದಲ್ಲಿ ಅಲ್ಪಸಲ್ಪ ಮಳೆಯಾಗಿದ್ದು ಸಣ್ಣಪುಟ್ಟ ಹಾನಿ ಸಂಭವಿಸಿದೆ.