ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸುರಿಯುವ ಸಾಧ್ಯತೆ ಇದೆ. ಶುಕ್ರವಾರ ಕೆಲವೆಡೆ ಸಾಧಾರಣ ಮಳೆ ಬಿದ್ದಿದೆ. ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಏ.1ರಿಂದ ಏ.5ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಕಲಬುರಗಿಯಲ್ಲಿ ಗರಿಷ್ಠ ತಾಪಮಾನದಲ್ಲಿ 38.7 ಉಷ್ಣಾಂಶ ದಾಖಲೆಯಾಗಿದೆ. ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನದಲ್ಲಿ 14.2 ಉಷ್ಣಾಂಶ ಇತ್ತು. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಸರಾಸರಿ 2 ಡಿಗ್ರಿ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು ಮತ್ತು ಕರಾವಳಿ ಕೆಲವೆಡೆ ಸರಾಸರಿ 3-4 ಕನಿಷ್ಠ ಉಷ್ಣಾಂಶ ಇಳಿಕೆಯಾಗಲಿದೆ. ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.